ಬುಧವಾರ, 27 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರದಲ್ಲಿ ತಂಪೆರೆದ ಮಳೆ

Published 19 ಆಗಸ್ಟ್ 2023, 20:28 IST
Last Updated 19 ಆಗಸ್ಟ್ 2023, 20:28 IST
ಅಕ್ಷರ ಗಾತ್ರ

ಬೆಂಗಳೂರು: ನಗರದ ಹಲವೆಡೆ ಶನಿವಾರ ಮಧ್ಯಾಹ್ನ ಹಾಗೂ ಸಂಜೆ ಜೋರು ಮಳೆ ಸುರಿದು ವಾತಾವರಣವನ್ನು ತಂಪಾಗಿಸಿತು.

ಕೆಲವು ದಿನಗಳಿಂದ ಮಳೆಯಿಲ್ಲದೇ ಬಿಸಿಲಿನ ವಾತಾವರಣ ಕಂಡುಬಂದಿತ್ತು. ಉಷ್ಣಾಂಶವು ಏರಿಕೆಯಾಗಿತ್ತು. ಶನಿವಾರ ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನದ ವೇಳೆಗೆ ಅಲ್ಲಲ್ಲಿ ಬಿರುಸಿನ ಮಳೆ ಸುರಿಯಿತು.

ಶೇಷಾದ್ರಿಪುರಂ, ಮಲ್ಲೇಶ್ವರ, ರಾಜಾಜಿನಗರ, ಮಹಾಲಕ್ಷ್ಮಿಲೇಔಟ್‌, ಯಶವಂತಪುರ, ಸುಂಕದಕಟ್ಟೆ, ಸದಾಶಿವನಗರ, ಆರ್‌ಟಿ ನಗರ, ವಸಂತನಗರ, ಎಂಜಿ ರಸ್ತೆ, ಟ್ರಿನಿಟಿ, ಅಶೋಕ ನಗರ, ಹಲಸೂರು ಭಾಗದಲ್ಲಿ ಮಳೆಯಾಗಿದೆ. ಮಳೆಯಿಂದ ರಕ್ಷಣೆ ಪಡೆಯಲು ಪಾದಚಾರಿಗಳು ಕೊಡೆಯ ರಕ್ಷಣೆ ಹೋಗಿದ್ದರು.

ಬ್ಯಾಟರಾಯನಪುರ, ಪೀಣ್ಯ ಕೈಗಾರಿಕಾ ವಲಯ, ಜಾಲಹಳ್ಳಿ, ಯಲಹಂಕ, ಕೆಂಗೇರಿ ಸೇರಿದಂತೆ ನಗರದ ಕೆಲವು ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT