ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಕೆಲವೆಡೆ ತುಂತುರು, ಹಲವೆಡೆ ಜೋರು ಮಳೆ: ವಾಹನ ಸವಾರರ ಪರದಾಟ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ನಗರದಲ್ಲಿ ಬುಧವಾರ ಸಂಜೆಯಿಂದ ರಾತ್ರಿಯ ವರೆಗೂ ಮಳೆ ಆಗಿದ್ದು, ಹಲವೆಡೆ ಕಾಲುವೆಗಳು ತುಂಬಿ ರಸ್ತೆ ಮೇಲೆ ಧಾರಾಕಾರವಾಗಿ ನೀರು ಹರಿಯಿತು. ಮಧ್ಯಾಹ್ನ ಕೆಲವೆಡೆ ತುಂತುರು ಮಳೆಯಾಯಿತು. ಸಂಜೆ ನಂತರ ಹಲವೆಡೆ ಜೋರು ಮಳೆ ಸುರಿಯಿತು.

ಯಶವಂತಪುರ, ಮಹಾಲಕ್ಷ್ಮಿಲೇಔಟ್, ಬಸವೇಶ್ವರನಗರ, ರಾಜಾಜಿನಗರ, ವಿಜಯನಗರ, ಮಲ್ಲೇಶ್ವರ, ಆರ್‌.ಟಿ.ನಗರ, ಪೀಣ್ಯ, ಹೆಬ್ಬಾಳ, ಬಸವನಗುಡಿ, ಎಂ.ಜಿ.ರಸ್ತೆ, ಶಿವಾಜಿನಗರ, ಅಶೋಕನಗರ, ಎಚ್‌ಎಎಲ್‌ ಹಾಗೂ ಸುತ್ತಮುತ್ತ ಸ್ಥಳಗಳಲ್ಲಿ ಮಳೆಯಾಗಿದೆ.

ಮೆಜೆಸ್ಟಿಕ್, ಶಿವಾನಂದ ವೃತ್ತದ ಕೆಳಸೇತುವೆಯಲ್ಲಿ ಮಳೆ ನೀರು ಹರಿಯಿತು. ಅಂಥ ನೀರಿನಲ್ಲೇ ಚಾಲಕರು ವಾಹನಗಳನ್ನು ಚಲಾ ಯಿಸಿಕೊಂಡು ಹೋದರು. ಕೆಲ ವಾಹನಗಳು ಕೆಟ್ಟು ನಿಂತಿದ್ದರಿಂದ, ದಟ್ಟಣೆಯೂ ಉಂಟಾಯಿತು. ‘ನಗರದಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಹಾನಿ ಯಾದ ಬಗ್ಗೆ ಯಾವುದೇ ದೂರುಗಳು ಬಂದಿಲ್ಲ’ ಎಂದು ಬಿಬಿಎಂಪಿ ಸಹಾಯವಾಣಿ ಸಿಬ್ಬಂದಿ ಹೇಳಿ ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು