ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಮಳೆ ಮುಂದುವರಿಕೆ

Published 13 ಮೇ 2023, 14:15 IST
Last Updated 13 ಮೇ 2023, 14:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾನುವಾರವೂ ಗುಡುಗು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಎಲ್ಲ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳದಲ್ಲೂ ಜೋರು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ವ್ಯಾಪ್ತಿಯ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆಯಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡು ವ್ಯಾಪ್ತಿಯಲ್ಲಿ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದು ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT