ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರು ದಿನಗಳಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Published 18 ಏಪ್ರಿಲ್ 2024, 15:19 IST
Last Updated 18 ಏಪ್ರಿಲ್ 2024, 15:19 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ಮೂರು ದಿನಗಳಲ್ಲಿ ರಾಜ್ಯದ ಎಲ್ಲ 31 ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಗುರುವಾರ ಕರಾವಳಿಯಲ್ಲಿ ಒಣಹವೆ ಮುಂದುವರಿದಿದ್ದರೆ, ಬೆಂಗಳೂರು ಗ್ರಾಮಾಂತರ, ಬೀದರ್‌ ಜಿಲ್ಲೆ ಸೇರಿ ಕೆಲವೆಡೆ ಅಲ್ಲಲ್ಲಿ ಮಳೆಯಾಗಿದೆ. 

ಶುಕ್ರವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆ ಬೀಳುವ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಶನಿವಾರದಂದು ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ, ಭಾನುವಾರ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಏ.22 ಮತ್ತು 23ರಂದು ರಾಜ್ಯದಾದ್ಯಂತ ಅಲ್ಲಲ್ಲಿ ಹಗುರ ಮಳೆ ಮುಂದುವರಿಯಲಿದೆ. 24ರಂದು ಒಣಹವೆ ಇರುವ ಸಾಧ್ಯತೆ ಇದೆ. 

ತಾಪಮಾನ: ಏ.19ರವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ಮತ್ತು ಆರ್ದ್ರತೆಯ ವಾತಾವರಣವಿರಲಿದೆ. ಮುಂದಿನ ಎರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ. ನಂತರದ ಮೂರು ದಿನಗಳವರೆಗೆ ಕ್ರಮೇಣ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಲಿದೆ.

‘ಏ.19ರಂದು ಕರಾವಳಿ ಭಾಗದ ಒಂದೆರಡು ಪ್ರದೇಶಗಳಲ್ಲಿ, 19ರಿಂದ 21ರ ವರೆಗೆ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ರಭಸವಾಗಿ ಗಾಳಿ ಬೀಸಲಿದೆ’ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT