ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಳೆ ದಕ್ಷಿಣ ಒಳನಾಡು ವ್ಯಾಪ್ತಿಯಲ್ಲಿ ಮಳೆ ಸಾಧ್ಯತೆ

Published 3 ಜೂನ್ 2023, 16:30 IST
Last Updated 3 ಜೂನ್ 2023, 16:30 IST
ಅಕ್ಷರ ಗಾತ್ರ

ಬೆಂಗಳೂರು: ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡು ವ್ಯಾಪ್ತಿಯ ಜಿಲ್ಲೆಗಳಲ್ಲಿ ಭಾನುವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದಲ್ಲಿ ಬಿರುಗಾಳಿಯು 45ರಿಂದ 55 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ಅಥವಾ ರಾತ್ರಿ ವೇಳೆ ಸಾಧಾರಣ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗದಲ್ಲಿ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶವು ಹೆಚ್ಚಾಗುವ ಸಾಧ್ಯತೆಯಿದೆ.

ಶನಿವಾರ ಬೆಳಿಗ್ಗೆ 8.30ಕ್ಕೆ ಅನ್ವಯಿಸಿದಂತೆ ಕಳೆದ 24 ಗಂಟೆ ಅವಧಿಯಲ್ಲಿ ಕೊಡಗಿನ ಪೊನ್ನಂಪೇಟೆಯಲ್ಲಿ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT