ಬೆಂಗಳೂರು: ರಾಜ್ಯದ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜುಲೈ 10 ರಿಂದ 12 ರ ತನಕ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ಜುಲೈ 13ರಂದು ಕರಾವಳಿ ಭಾಗದ ಜಿಲ್ಲೆಗಳೂ ಸೇರಿದಂತೆ ಮಲೆನಾಡು ಭಾಗದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.