ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ ಜಿಲ್ಲೆಗಳಲ್ಲಿ ‘ರೆಡ್‌ ಅಲರ್ಟ್‌’

Last Updated 22 ಜುಲೈ 2021, 20:23 IST
ಅಕ್ಷರ ಗಾತ್ರ

ಬೆಂಗಳೂರು: ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜು.27ರವರೆಗೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ಜು.23ರಂದು ‘ರೆಡ್ ಅಲರ್ಟ್‌’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿಯಲ್ಲಿ ಗಂಟೆಗೆ 50ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, 4.4 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಮೀನುಗಾರರು ಇದೇ 26ರವರೆಗೆ ಸಮುದ್ರಕ್ಕೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಮುಂಗಾರು ಬಿರುಸುಗೊಂಡಿರುವುದರಿಂದ ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲೂ ಗುಡುಗು, ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸೂಚನೆ ಇರುವುದರಿಂದ ‘ಆರೆಂಜ್ ಅಲರ್ಟ್‌’ ಘೋಷಿಸಲಾಗಿದೆ. ಬೀದರ್, ಹಾವೇರಿ, ಕಲಬುರ್ಗಿ, ಯಾದಗಿರಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ನೀಡಿರುವುದಾಗಿ ತಿಳಿಸಿದೆ.

ಮಳೆ–ಎಲ್ಲಿ, ಎಷ್ಟು?: ಉತ್ತರ ಕನ್ನಡ ಜಿಲ್ಲೆಯಜಗಲ್ಬೇಟ್ ಭಾಗದಲ್ಲಿ ಗುರುವಾರ 19 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸೋಮವಾರಪೇಟೆ 11, ಸಕಲೇಶಪುರ 10, ನಿಪ್ಪಾಣಿ, ಕೊಪ್ಪ, ತೀರ್ಥಹಳ್ಳಿ 9, ಚಿಕ್ಕೋಡಿ, ಕಾರ್ಕಳ 5, ಹುಕ್ಕೇರಿ 4, ಭಟ್ಕಳ, ಸುಳ್ಯ, ಬೆಳ್ತಂಗಡಿ, ತರೀಕೆರೆ 3, ಪುತ್ತೂರು, ಅಥಣಿ, ರಾಯಚೂರು, ಸೊರಬ, ಶಿಕಾರಿಪುರ 2, ಮೂಡುಬಿದರೆ, ಮಂಗಳೂರು, ಧಾರವಾಡ, ಅರಕಲಗೂಡು, ಕೂಡ್ಲಿಗಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT