ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ | ಸಿಡಿಲು ಸಹಿತ ಮಳೆ ಸಾಧ್ಯತೆ: 7 ಜಿಲ್ಲೆಗಳಲ್ಲಿ 'ಯೆಲ್ಲೊ ಅಲರ್ಟ್'

Last Updated 12 ಜುಲೈ 2020, 18:15 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಇದೇ 13ರಿಂದ 17ರವರೆಗೆ ಗುಡುಗು ಸಿಡಿಲು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಭಾಗದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದ್ದು 'ಯೆಲ್ಲೊ ಅಲರ್ಟ್' ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಮಳೆ ಪ್ರಮಾಣ ತಗ್ಗಿದೆ. ಕರಾವಳಿಯಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಮಳೆ, ಎಲ್ಲಿ ಎಷ್ಟು?: ಗದಗದಲ್ಲಿ ಗರಿಷ್ಠ 7 ಸೆಂ.ಮೀ ಮಳೆಯಾಗಿದೆ. ಕಾರವಾರ, ಕೊಪ್ಪಳ 6, ಉಡುಪಿ 5, ಮಂಗಳೂರು, ಬೆಳ್ತಂಗಡಿ, ಶಿಡ್ಲಘಟ್ಟ, ಪಿರಿಯಾಪಟ್ಟಣ 4, ಚಿಕ್ಕಬಳ್ಳಾಪುರ 3, ಕುಂದಾಪುರ, ಕಾರ್ಕಳ, ಚಿಂತಾಮಣಿ, ಭಾಗಮಂಡಲ 2, ಪುತ್ತೂರು, ಮೂಡುಬಿದರೆ, ಸರಗೂರು, ಬಂಗಾರಪೇಟೆಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT