ಸೋಮವಾರ, ಜನವರಿ 25, 2021
21 °C

ಬೆಂಗಳೂರು: ಚಂಡಮಾರುತದ ಪರಿಣಾಮ ದಿನವಿಡೀ ಜಿಟಿಜಿಟಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ನಿವಾರ್’ ಚಂಡಮಾರುತದ ಪರಿಣಾಮದಿಂದ ನಗರದಾದ್ಯಂತ ಗುರುವಾರ ದಿನವಿಡೀ ಜಿಟಿಜಿಟಿ ಮಳೆ ಸುರಿಯಿತು.

ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿದ್ದ ‘ನಿವಾರ್’ ಚಂಡಮಾರುತದಿಂದಾಗಿ ನಗರದಲ್ಲಿ ಮಳೆಯಾಯಿತು. ಧಾರಾಕಾರ ಮಳೆ ಸಂಭವಿಸದೆ, ದಟ್ಟವಾದ ಮೋಡ ಕವಿದ ವಾತಾವರಣದೊಂದಿಗೆ ತುಂತುರು ಮಳೆ ನಿರಂತರವಾಗಿ ಸುರಿಯಿತು. ಮಳೆಯ ನಡುವೆಯೂ ಚಳಿ ತೀವ್ರವಾಗಿತ್ತು. ‘ನಿವಾರ್’ನಿಂದ ನಗರದಲ್ಲಿ ಸರಾಸರಿ 3 ಸೆಂ.ಮೀಗಿಂತ ಕಡಿಮೆ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕೆಂಗೇರಿ, ಮೈಸೂರು ರಸ್ತೆ, ವಿಜಯನಗರ, ರಾಜಾಜಿನಗರ, ಮೆಜೆಸ್ಟಿಕ್, ಕೆ.ಆರ್.ಮಾರುಕಟ್ಟೆ, ಶಾಂತಿನಗರ, ಜಯನಗರ, ಚಾಮರಾಜಪೇಟೆ, ಹೆಬ್ಬಾಳ, ಯಲಹಂಕ, ಬನಶಂಕರಿ, ರಾಜರಾಜೇಶ್ವರಿ ನಗರ ಸೇರಿದಂತೆ ಬಹುತೇಕ ಎಲ್ಲ ಬಡಾವಣೆಗಳಲ್ಲಿ ತುಂತುರು ಮಳೆ ಮಧ್ಯಾಹ್ನದವರೆಗೆ ಸುರಿಯಿತು. ಸಂಜೆ ವೇಳೆಗೆ ಏರತೊಡಗಿದ ಮಳೆ ರಾತ್ರಿವರೆಗೆ ನಿರಂತರವಾಗಿ ಸುರಿಯಿತು.

‘ಯೆಲ್ಲೊ ಅಲರ್ಟ್’ ಮುಂದುವರಿಕೆ: ‘ನಿವಾರ್’ ಚಂಡಮಾರುತದ ಪರಿಣಾಮ ಬೆಂಗಳೂರಿನಲ್ಲಿ ಶುಕ್ರವಾರವೂ ಮಳೆಯಾಗುವ ಮುನ್ಸೂಚನೆ ಇರುವುದರಿಂದ ‘ಯೆಲ್ಲೊ ಅಲರ್ಟ್’ ಮುಂದುವರಿಸಲಾಗಿದೆ. ಶನಿವಾರದವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು