ಭಾನುವಾರ, ಅಕ್ಟೋಬರ್ 24, 2021
25 °C

ಬೆಂಗಳೂರಿನಲ್ಲಿ ಇನ್ನು ಮುಂದೆ 30x40 ಅಳತೆಯ ಮನೆಗಳಲ್ಲಿ ಮಳೆ ನೀರು ಸಂಗ್ರಹ ಕಡ್ಡಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಇನ್ನು ಮುಂದೆ 30X40 ಅಳತೆಯ ನಿವೇಶನಗಳಲ್ಲಿ ಮನೆ ಕಟ್ಟುವವರು ಮಳೆ ನೀರು ಸಂಗ್ರಹ ವ್ಯವಸ್ಥೆ ಮಾಡುವುದನ್ನು ಕಡ್ಡಾಯಗೊಳಿಸುವ ‘ಬೆಂಗಳೂರು ನೀರು ಸರಬರಾಜು ಮತ್ತು ಗ್ರಾಮ ಸಾರ ಚರಂಡಿ ವ್ಯವಸ್ಥೆ ಮಸೂದೆ’ 2021 ಕ್ಕೆ ವಿಧಾನಸಭೆ ಗುರುವಾರ ಅಂಗೀಕಾರ ನೀಡಿತು.

ಮುಖ್ಯಮಂತ್ರಿಯವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಮಸೂದೆಯನ್ನು ಮಂಡಿಸಿ, ಈವರೆಗೆ 60X40 ಅಡಿ ವಿಸ್ತೀರ್ಣದ ನಿವೇಶನಗಳಿಗೆ ಮಾತ್ರ ಕಡ್ಡಾಯಗೊಳಿಸಲಾಗಿತ್ತು ಎಂದರು.

ಈಗಾಗಲೇ 30X40 ಅಳತೆಯ ನಿವೇಶನಗಳಲ್ಲಿ ಮನೆ ನಿರ್ಮಿಸಿಕೊಂಡವರಿಗೆ ಇದು ಅನ್ವಯವಾಗುವುದಿಲ್ಲ. ಅವರಿಗೆ ವಿನಾಯತಿ ನೀಡಲಾಗುತ್ತದೆ. ಆದರೆ, 60X40 ವಿಸ್ತೀರ್ಣದ ನಿವೇಶನಗಳಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆ ಇಲ್ಲದೆ ಮನೆ ಕಟ್ಟಿಕೊಂಡವರು ಆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ವಿವರಿಸಿದರು.

ಇದರಿಂದ ಅಂತರ್ಜಲ ಮರುಪೂರಣಕ್ಕೆ ಅನುಕೂಲವಾಗುತ್ತದೆ. ಕಾವೇರಿ ನೀರು ಅಥವಾ ಅಂರ್ತಜಲದ ಅತಿಯಾದ ಮೇಲಿನ ಅವಲಂಬನೆಯೂ ಕಡಿಮೆ ಆಗುತ್ತದೆ. ಮಳೆ ನೀರು ಒಳಚರಂಡಿಯಲ್ಲಿ ಹರಿದು ಹೋಗಿ ವ್ಯರ್ಥವಾಗುವುದನ್ನು ತಗ್ಗಿಸಬಹುದು ಮತ್ತು ನಗರ ಪ್ರವಾಹ ತಗ್ಗಿಸಲು ಸಹಾಯಕವಾಗುತ್ತದೆ ಎಂದು ಮಾಧುಸ್ವಾಮಿ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು