ಬೆಂಗಳೂರು: ಬೆಳ್ಳಂದೂರು ಹಾಗೂ ವರ್ತೂರು ಕೆರೆಗಳಿಗೆ ಸುತ್ತಮುತ್ತಲಿನ ಅಪಾರ್ಟ್‌ಮೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಿಂದ ಮಳೆ ನೀರು ಹರಿಸಲು ಜಲಮಂಡಳಿ ಚಿಂತನೆ ನಡೆಸಿದೆ ಎಂದು ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ತಿಳಿಸಿದರು.

ವರ್ತೂರು ಕೆರೆಗೆ ನೀರು ಹರಿಸುವ ಸಂಬಂಧ ಮಂಗಳವಾರ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ನಗರದಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಜಲಮಂಡಳಿಯಿಂದ ‘ಸಮುದಾಯ ಮಳೆ ನೀರು ಸಂಗ್ರಹ’ ಯೋಜನೆ ಪ್ರಾರಂಭಿಸಲು ನಿರ್ಧರಿಸಲಾಗಿದೆ. ಮೊದಲ ಹಂತದಲ್ಲಿ ವರ್ತೂರು, ಬೆಳ್ಳಂದೂರು ಭಾಗದಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತದೆ ಎಂದರು.

ಅಪಾರ ಪ್ರಮಾಣದಲ್ಲಿ ಹರಿದು ಹೋಗುವ ಮಳೆ ನೀರನ್ನು ಸಮರ್ಪಕವಾದ ವ್ಯವಸ್ಥೆಯ ಮೂಲಕ ಕೆರೆಗಳಿಗೆ ಹರಿಸುವುದು ಈ ಯೋಜನೆಯ ಮುಖ್ಯ ಉದ್ದೇಶ. ಕೆರೆಗಳಿಂದ 500 ಮೀಟರ್ ಸುತ್ತಳತೆ ಯಲ್ಲಿರುವಂತಹ ಅಪಾರ್ಟ್ ಮೆಂಟ್‌ಗಳು, ಸಾರ್ವಜನಿಕ ಪ್ರದೇಶಗಳು ಹಾಗೂ ದೊಡ್ಡ ಕಟ್ಟಡಗಳಿಂದ ಪೈಪ್‌ಲೈನ್ ಮೂಲಕ ಕೆರೆಗಳಿಗೆ ನೇರವಾಗಿ ಮಳೆ ನೀರನ್ನು ತುಂಬಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ನಗರದಲ್ಲಿ ಕಟ್ಟಡಗಳಲ್ಲಿ ಮಳೆ ನೀರು ಸಂಗ್ರಹ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ. ಆದರೆ, ಕಟ್ಟಡಗಳಲ್ಲಿನ ಜಾಗದ ಕೊರತೆ ಹಾಗೂ ನಿರ್ಲಕ್ಷದಿಂದ ಇದರ ಸರಿಯಾದ ಅನುಷ್ಠಾನ ಸಾಧ್ಯವಾಗಿಲ್ಲ. ಬಹುತೇಕ ಕಡೆಗಳಲ್ಲಿ ಕೇವಲ ಅಗತ್ಯ ಅನುಮತಿ ಪಡೆದುಕೊಳ್ಳಲು ಮಳೆ ನೀರು ಸಂಗ್ರಹ ಪದ್ದತಿಯನ್ನು ಅಳವಡಿಸಿದ್ದು, ಮಳೆ ನೀರನ್ನು ಸಂಗ್ರಹಿಸಿ ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ. ಇದರಿಂದ ಮಳೆಗಾಲದಲ್ಲಿ ಒಳಚರಂಡಿ ವ್ಯವಸ್ಥೆ ಒತ್ತಡಕ್ಕೆ ಒಳಗಾಗಿ ಪ್ರವಾಹ ಪರಿಸ್ಥಿತಿ ಉಂಟಾಗುತ್ತದೆ ಎಂದು ಹೇಳಿದರು.

ಮಳೆ ನೀರು ವ್ಯರ್ಥವಾಗಿ ಹರಿದು ಚರಂಡಿ ಪಾಲಾಗುತ್ತಿದೆ. ನೀರು ವ್ಯರ್ಥ ವಾಗದಂತೆ ಅಮೂಲ್ಯ ಮಳೆ ನೀರನ್ನು ಸಂಗ್ರಹಿಸಿ ಅದನ್ನು ಅಂತರ್ಜಲ ವೃದ್ಧಿಗೆ ಬಳಸಿಕೊಳ್ಳಲು ‘ಸಮುದಾಯ ಮಳೆ ನೀರು ಸಂಗ್ರಹ’ ಯೋಜನೆ ರೂಪಿಸಲಾಗಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.