ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಧಾರಾಕಾರ ಮಳೆ ಸಾಧ್ಯತೆ: ಕರಾವಳಿ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’

Published 26 ಮೇ 2024, 15:25 IST
Last Updated 26 ಮೇ 2024, 15:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ಕರಾವಳಿ ಭಾಗದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 27 ಹಾಗೂ 28 ರಂದು ಈ ಎರಡು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್‌’ ಸೂಚನೆ ನೀಡಲಾಗಿದೆ. ಉಳಿದಂತೆ, ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ತಿಳಿಸಿದೆ.

ದಕ್ಷಿಣ ಒಳನಾಡು, ಉತ್ತರ ಒಳನಾಡು ಭಾಗದ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಭಾನುವಾರ, ಬೆಳಿಗ್ಗೆ 8.30 ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳಲ್ಲಿ ವಿಜಯಪುರ ಜಿಲ್ಲೆಯ ಸಿಂದಗಿ ಹಾಗೂ ಬೆಳಗಾವಿಯಲ್ಲಿ 1 ಸೆಂ.ಮೀ ಮಳೆಯಾದ ವರದಿಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT