ಬುಧವಾರ, ಜುಲೈ 28, 2021
20 °C

ರೈನ್ ಬೋ ಮಕ್ಕಳ ಆಸ್ಪತ್ರೆ: 5 ಸಾವಿರ ಮಂದಿಗೆ ಲಸಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರೈನ್ ಬೋ ಮಕ್ಕಳ ಆಸ್ಪತ್ರೆಯು ನಗರದಲ್ಲಿ ಭಾನುವಾರ ಆಯೋಜಿಸಿದ ಲಸಿಕೆ ವಿತರಣಾ ಅಭಿಯಾನದಲ್ಲಿ 5 ಸಾವಿರಕ್ಕೂ ಅಧಿಕ ಮಂದಿ ಲಸಿಕೆ ಪಡೆದುಕೊಂಡರು.

ಈ ಅಭಿಯಾನದಲ್ಲಿ ‘ಕೋವಿಶಿಲ್ಡ್’ ಮತ್ತು ‘ಕೋವ್ಯಾಕ್ಸಿನ್’ ಎರಡೂ ಲಸಿಕೆಯನ್ನು ನೀಡಲಾಯಿತು. 30 ಕೌಂಟರ್‌ಗಳಲ್ಲಿ 50ಕ್ಕೂ ಅಧಿಕ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಹಾಗೆಯೇ, 10 ಕೇಂದ್ರಗಳನ್ನು ಲಸಿಕೆ ನೀಡಲು ಸಿದ್ಧಪಡಿಸಲಾಗಿತ್ತು.

ಈ ಬಗ್ಗೆ ಮಾತನಾಡಿದ ಆಸ್ಪತ್ರೆಯ ಮುಖ್ಯಸ್ಥ ನಿತ್ಯಾನಂದ, ‘ಕೋವಿಡ್‌ನಿಂದ ರಕ್ಷಣೆ ಪಡೆಯಲು ಲಸಿಕೆ ಸಹಕಾರಿ. ಜನತೆ ಲಸಿಕೆ ಪಡೆಯಲು ಕಾತುರರಾಗಿದ್ದಾರೆ. ಆದರೆ, ಎಲ್ಲೆಡೆ ಲಸಿಕೆ ದೊರೆಯುತ್ತಿಲ್ಲ.  ಹೀಗಾಗಿ, ಹತ್ತು ದಿನಗಳಿಂದ ಲಸಿಕೆ ಅಭಿಯಾನ ನಡೆಸುತ್ತಿದ್ದೇವೆ’ ಎಂದು ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.