ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರದಲ್ಲಿ ಆಗಸ್ಟ್‌ನಲ್ಲಿ ಕನಿಷ್ಠ ಮಳೆ, ಗರಿಷ್ಠ ಉಷ್ಣಾಂಶ

Last Updated 31 ಆಗಸ್ಟ್ 2020, 19:51 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಆಗಸ್ಟ್ ತಿಂಗಳಲ್ಲಿ 14 ವರ್ಷಗಳಲ್ಲೇ ಈ ಬಾರಿ ಕನಿಷ್ಠ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಪ್ರತಿ ಆಗಸ್ಟ್ ನಲ್ಲಿ ಸರಾಸರಿ 14.7 ಸೆಂ.ಮೀ ಮಳೆಯಾಗುತ್ತಿತ್ತು. ಈ ಸಲ ಕೇವಲ 7.59 ಸೆಂ.ಮೀ ಮಳೆ ದಾಖಲಾಗಿದೆ. ಎಚ್‍ಎಎಲ್ ವಿಮಾನ ನಿಲ್ದಾಣ 8.38 ಹಾಗೂ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೇವಲ 5.66 ಸೆಂ.ಮೀ ಮಳೆ ದಾಖಲಾಗಿದೆ.

ನಗರದಲ್ಲಿ ಭಾನುವಾರ 31.6 ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು 5 ವರ್ಷಗಳಲ್ಲಿ ಆಗಸ್ಟ್ ತಿಂಗಳಲ್ಲಿ ದಾಖಲಾಗಿರುವ ಅತಿ ಹೆಚ್ಚು ಉಷ್ಣಾಂಶ ಎಂದು ಹಮಾವಾನ ಇಲಾಖೆ ಟ್ವೀಟ್ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT