ಭಾನುವಾರ, ಏಪ್ರಿಲ್ 5, 2020
19 °C

ಬೆಂಗಳೂರಿನಲ್ಲಿ ಜೋರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಭಾನುವಾರ ಸಂಜೆ ಜೋರು ಮಳೆ ಶುರುವಾಗಿದೆ.  

ಗಾಂಧಿನಗರ, ಎಂ.ಜಿ.ರಸ್ತೆ, ಶಿವಾಜಿನಗರ, ಸಂಪಂಗಿ ರಾಮನಗರ, ಶಾಂತಿನಗರ, ಇಂದಿರಾನಗರ, ಹಲಸೂರು ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ಮಳೆ ಆಗುತ್ತಿದೆ.

ಜೋರು ಗಾಳಿ ಹಾಗೂ ಗುಡುಗು ಸಹಿತವಾಗಿ ಮಳೆ ಬರುತ್ತಿದ್ದು, ಜನರೆಲ್ಲ ರಸ್ತೆ ಅಕ್ಕ–ಪಕ್ಕದ ಅಂಗಡಿಗಳಲ್ಲಿ ಆಶ್ರಯ ಪಡೆದಿದ್ದಾರೆ.

ನಾಗರಬಾವಿ, ಕೆಂಗೇರಿ, ರಾಜರಾಜೇಶ್ವರಿನಗರ, ಅನ್ನಪೂರ್ಣೇಶ್ವರಿನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲೂ ಜೋರಾದ ಮಳೆ ಆಗುತ್ತಿದೆ.

ಬೆಳಿಗ್ಗೆಯಿಂದಲೇ ನಗರದಲ್ಲಿ ಬಿಸಿಲಿನ ತಾಪ ಹೆಚ್ಚಿತ್ತು. ಸಂಜೆ ವೇಳೆಗೆ ಮೋಡ ಮುಸುಕಿದ ವಾತಾವರಣದೊಂದಿಗೆ ಜೋರು ಗಾಳಿ ಬೀಸಿ ಮಳೆ ಆರಂಭವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು