ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಒಳಚರಂಡಿಗೆ ಮಳೆನೀರು: ಕ್ರಮಕ್ಕೆ ಸೂಚನೆ

Published 25 ಮೇ 2024, 15:06 IST
Last Updated 25 ಮೇ 2024, 15:06 IST
ಅಕ್ಷರ ಗಾತ್ರ

ಬೆಂಗಳೂರು: ಒಳಚರಂಡಿಗೆ ಮಳೆನೀರು ನೇರವಾಗಿ ಸೇರುತ್ತಿರುವ ಪ್ರದೇಶಗಳನ್ನು ಗುರುತಿಸುವ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಜಲಮಂಡಳಿ ಅಧ್ಯಕ್ಷ ಡಾ.ವಿ.ರಾಮ್‌ಪ್ರಸಾತ್‌ ಮನೋಹರ್‌ ಅವರು ಅಧಿಕಾರಿಗಳಿಗೆ ಸೂಚಿಸಿದರು.

ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಮಳೆಗಾಲದಲ್ಲಿ ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡ ಹೆಚ್ಚಲಿದ್ದು, ಸಮಸ್ಯೆಗಳು ಎದುರಾಗುತ್ತವೆ. ಇದನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಉಪ ಮುಖ್ಯಮಂತ್ರಿಯವರು ನಿರ್ದೇಶನ ನೀಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಕಾರ್ಯನಿರತರಾಗಬೇಕು’ ಎಂದರು.

ಮ್ಯಾನ್‌ಹೋಲ್‌ ಡಿಸಿಲ್ಟಿಂಗ್‌, ಒಳಚರಂಡಿ ಸ್ವಚ್ಛತೆಯ ಕಾರ್ಯ ಕೈಗೊಳ್ಳಲಾಗುತ್ತಿದೆ. ಆದರೂ ಕೆಲವು ಕಡೆಗಳಿಂದ ದೂರುಗಳು ಬರುತ್ತಿವೆ. ಮಳೆ ನೀರು ನೇರವಾಗಿ ಒಳಚರಂಡಿಗೆ ಸೇರ್ಪಡೆ ಆಗುತ್ತಿರುವುದನ್ನು ಪರಿಶೀಲನೆ ನಡೆಸಬೇಕು. ಮಳೆ ನೀರು ಸಮರ್ಪಕವಾಗಿ ಹರಿದುಹೋಗಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ನಾಗರಿಕರು ಕೂಡಾ ಸಹ ಜಲಸಾಕ್ಷರರಾಗಿ ನೀರಿನ ಸಂರಕ್ಷಣೆಗೆ ನೆರವಾಗಬೇಕು. ಅಲ್ಲದೆ, ಮನೆಗಳಲ್ಲಿ ಮಳೆ ನೀರು ಸಂಗ್ರಹ ಪದ್ಧತಿ ಅಳವಡಿಸಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಆದೇಶಿಸಿದರು.

ಕುಡಿಯುವ ನೀರಿನ ಗುಣಮಟ್ಟದ ಬಗ್ಗೆ ನಿಗಾ ವಹಿಸಬೇಕು. ನೀರು ಕಲುಷಿತಗೊಳ್ಳದಂತೆ ನೋಡಿಕೊಳ್ಳಬೇಕು. ಹಾಗೆಯೇ, ಪ್ರಸ್ತುತ ನೀರಿನ ಪರೀಕ್ಷೆ ಮಾಡುತ್ತಿರುವ ಸಂಖ್ಯೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ನೀರಿನ ಪರೀಕ್ಷೆ ಮಾಡಬೇಕು ಎಂದು ಅಧ್ಯಕ್ಷರು ಸೂಚಿಸಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಎಂಜಿನಿಯರ್ ಸುರೇಶ, ಮುಖ್ಯ ಎಂಜಿನಿಯರ್‌ಗಳಾದ ಎಲ್.ಕುಮಾರ ನಾಯ್ಕ್‌, ಕೆ.ಎನ್.ಪರಮೇಶ, ಎಸ್.ವಿ. ವೆಂಕಟೇಶ, ಎ. ರಾಜಶೇಖರ್, ಮಹೇಶ ಕೆ.ಎನ್., ರಾಜೀವ್ ಕೆ.ಎನ್., ಗಂಗಾಧರ್ ಬಿ.ಸಿ., ದೇವರಾಜು ಎಂ., ಜಯಶಂಕರ್‌ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT