ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಕೆ; ಹವಾಮಾನ ಇಲಾಖೆ

Published 19 ಏಪ್ರಿಲ್ 2024, 16:06 IST
Last Updated 19 ಏಪ್ರಿಲ್ 2024, 16:06 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಅಲ್ಲಲ್ಲಿ ಇನ್ನೆರಡು ದಿನ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶನಿವಾರ ಬೀದರ್‌, ಕೊಡಗು ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಉಳಿದ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ. ಭಾನುವಾರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಬೀಳುವ ಸಂಭವವಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಾಪಮಾನ: ಮುಂದಿನ ಎರಡು ದಿನಗಳಲ್ಲಿ ಗರಿಷ್ಠ ಉಷ್ಣಾಂಶದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ. ನಂತರದ ಮೂರು ದಿನಗಳವರೆಗೆ ಕ್ರಮೇಣ 2 ರಿಂದ 3 ಡಿಗ್ರಿ ಸೆಲ್ಸಿಯಸ್‌ ಏರಿಕೆಯಾಗಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT