ಸೋಮವಾರ, ಏಪ್ರಿಲ್ 12, 2021
24 °C

ಬೆಂಗಳೂರು: ರಾಜಭವನ ಚಲೋ ಇಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಭೂಸುಧಾರಣಾ ತಿದ್ದುಪಡಿ ಮಸೂದೆ ಹಿಂಪಡೆಯಲು ಒತ್ತಾಯಿಸಿ ಮತ್ತು ಯಾವುದೇ ತಿದ್ದುಪಡಿ ಕಾಯ್ದೆಗಳನ್ನು ತರಾತುರಿಯಲ್ಲಿ ಮಂಡಿಸಿದಂತೆ ಒತ್ತಾಯಿಸಿ ಗುರುವಾರ (ಡಿ.10) ರಾಜಭವನ ಚಲೋ ನಡೆಸಲು ದಲಿತ, ರೈತ ಮತ್ತು ಕಾರ್ಮಿಕ ಸಂಘಟನೆಗಳ ಐಕ್ಯ ಹೋರಾಟ ಸಮಿತಿ ನಿರ್ಧರಿಸಿದೆ.

ರೈತರು, ಕಾರ್ಮಿಕರ ವಿರೋಧ ಲೆಕ್ಕಿಸದೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕಾಯ್ದೆಗಳಿಗೆ ತಿದ್ದುಪಡಿ ತರಲು ಹೊರಟಿವೆ. ಇದನ್ನು ವಿರೋಧಿಸಿ ಗುರುವಾರ ನಡೆಯಲಿರುವ ಪ್ರತಿಭಟನೆಯಲ್ಲಿ ಭಾಗವಹಿಸಲು ರಾಜ್ಯದ ಎಲ್ಲೆಡೆಯಿಂದ ರೈತರು, ಜನಪರ ಸಂಘಟನೆಗಳ ಕಾರ್ಯಕರ್ತರು ಬರಲಿದ್ದಾರೆ ಎಂದು ಸಮಿತಿ ತಿಳಿಸಿದೆ.

ಕಳೆದ ವಿಧಾನಸಭೆ ಅಧಿವೇಶನದಲ್ಲಿ ಅಂಗೀಕಾರ ದೊರಕದಿದ್ದರೂ ಸುಗ್ರೀವಾಜ್ಞೆಗಳ ಮೂಲಕ ಜನರ ಮೇಲೆ ಕಾಯ್ದೆಗಳನ್ನು ಹೇರಲು ಸರ್ಕಾರ ಹೊರಟಿತ್ತು. ಈ ಅಧಿವೇಶನದಲ್ಲಿ ಮಸೂದೆಗಳನ್ನು ಮತ್ತೆ ಮಂಡಿಸಿದೆ. ರೈತರ ಮನವಿಗೆ ರಾಜ್ಯ ಸರ್ಕಾರ ಸ್ಪಂದಿಸಿ, ಮಸೂದೆಗಳನ್ನು ವಾಪಸ್ ಪಡೆಯದೇ ಇದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದೂ ಸಮಿತಿ ಎಚ್ಚರಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು