ಬೆಂಗಳೂರು: ರೈತ–ಕಾರ್ಮಿಕ ವಿರೋಧಿ ಕೃಷಿ ಕಾಯ್ದೆಗಳು ಮತ್ತು ಕಾರ್ಮಿಕ ಕಾಯ್ದೆಗಳನ್ನು ರದ್ದು ಮಾಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸಂಯುಕ್ತ ಹೋರಾಟ ಸಮಿತಿ ವತಿಯಿಂದ ನ.26ರಿಂದ 28ರವರೆಗೆ ಬೃಹತ್ ರಾಜಭವನ ಚಲೋ ಮಹಾಧರಣಿ ಹಮ್ಮಿಕೊಳ್ಳಲಾಗಿದೆ ಎಂದು ‘ಸಂಯುಕ್ತ ಹೋರಾಟ–ಕರ್ನಾಟಕ’ ಸಂಯೋಜಕರಾದ ಬಡಗಲಪುರ ನಾಗೇಂದ್ರ, ಎಸ್.ಆರ್. ಹಿರೇಮಠ್ ತಿಳಿಸಿದರು.

ಜನವಿರೋಧಿ ನೀತಿಗಳನ್ನು ಹಿಮ್ಮೆಟ್ಟಿಸಲು, ಪರ್ಯಾಯ ಜನಪರ ನೀತಿಗಳನ್ನು ರೂಪಿಸಲು 72 ಗಂಟೆಗಳ ಕಾಲ ಮಹಾಧರಣಿ ಹಮ್ಮಿಕೊಂಡಿದ್ದು, ಸಾವಿರಾರು ಸಂಖ್ಯೆಯಲ್ಲಿ ರೈತರು, ಕಾರ್ಮಿಕರು, ದಲಿತರು, ಮಹಿಳೆಯರು, ವಿದ್ಯಾರ್ಥಿಗಳು, ಯುವಜನರು ಭಾಗವಹಿಸಲಿದ್ದಾರೆ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ದೆಹಲಿಯಲ್ಲಿ ಸತತ 13 ತಿಂಗಳುಗಳ ಕಾಲ ರೈತರು ಐತಿಹಾಸಿಕ ಹೋರಾಟ ನಡೆಸಿದ್ದರಿಂದ ಮೋದಿ ಸರ್ಕಾರವು ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಿತು. ಆದರೆ, ಕನಿಷ್ಠ ಬೆಂಬಲ ಬೆಲೆ ಕಾಯ್ದೆ ಜಾರಿ, ವಿದ್ಯುತ್ ತಿದ್ದುಪಡಿ ಮಸೂದೆ ರದ್ದು ಮುಂತಾದ ವಿಷಯಗಳಲ್ಲಿ ರೈತರಿಗೆ ನೀಡಿದ್ದ ಲಿಖಿತ ಭರವಸೆಗಳನ್ನು ಈಡೇರಿಸಿಲ್ಲ ಎಂದು ಆರೋಪಿಸಿದರು.

ಬೀಜ, ರಸಗೊಬ್ಬರ, ವಿದ್ಯುತ್‌ಗೆ ನೀಡುವ ಸಬ್ಸಿಡಿ ಹೆಚ್ಚಿಸಬೇಕು. ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂಬುದೂ ಸೇರಿದಂತೆ 24 ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಲಾಗುವುದು ಎಂದು ತಿಳಿಸಿದರು. ಸಂಯೋಜಕರಾದ ಜಿ.ಸಿ. ಬಯ್ಯಾರೆಡ್ಡಿ, ಮಾವಳ್ಳಿ ಶಂಕರ್,ಎಚ್.ವಿ. ದಿವಾಕರ್, ಮುಖಂಡರಾದ ಎಸ್. ವರಲಕ್ಷ್ಮೀ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.