ಇಎಸ್ಐ ಆಸ್ಪತ್ರೆ: ಡೀನ್ ವರ್ಗಾವಣೆ

ಬೆಂಗಳೂರು: ರಾಜಾಜಿನಗರದ ಇಎಸ್ಐ ಆಸ್ಪತ್ರೆಯ ಶೈತ್ಯಾಗಾರದಲ್ಲಿ, ಕೋವಿಡ್ನಿಂದ ಮೃತಪಟ್ಟಿದ್ದ ಇಬ್ಬರ ಶವಗಳು ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಆಸ್ಪತ್ರೆಯ ಡೀನ್ ಡಾ.ಜಿತೇಂದ್ರ ಕುಮಾರ್ ಅವರನ್ನು ವರ್ಗಾವಣೆ ಮಾಡಿ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯ ಆದೇಶ ಹೊರಡಿಸಿದೆ.
ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಪ್ರಾಧ್ಯಾಪಕಿ ಡಾ. ರೇಣುಕಾ ರಾಮಯ್ಯ ಅವರನ್ನು ಡೀನ್ ಆಗಿ ನೇಮಕ ಮಾಡಲಾಗಿದೆ.
ಕಳೆದ ತಿಂಗಳ 27ರಂದು ಆಸ್ಪತ್ರೆಯ ಶವಾಗಾರದಲ್ಲಿ ಮೃತದೇಹಗಳು ಪತ್ತೆಯಾಗಿದ್ದವು. ಪ್ರಾಥಮಿಕ ತನಿಖೆ ನಡೆಸಿದ ಪೊಲೀಸರು, ಮರಣೋತ್ತರ ಪರೀಕ್ಷೆಗೆ ಮೃತ ದೇಹಗಳನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಗೆ ರವಾನಿಸಿದ್ದರು. ಮೃತರನ್ನು ದುರ್ಗಾ ಸುಮಿತ್ರಾ ಹಾಗೂ ಮುನಿರಾಜು ಎಂದು ಗುರುತಿಸಲಾಗಿತ್ತು. ಆಸ್ಪತ್ರೆಯ ನಿರ್ಲಕ್ಷ್ಯದ ಬಗ್ಗೆ ಕುಟುಂಬದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದರು.
ಘಟನೆಗೆ ಸಂಬಂಧಿಸಿದಂತೆ ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರು ಇಎಸ್ಐ ಆಸ್ಪತ್ರೆ ಅಧಿಕಾರಿಗಳೊಂದಿಗೆ ಚರ್ಚಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.