ಬುಧವಾರ, ನವೆಂಬರ್ 20, 2019
22 °C

ವಿದ್ಯಾರ್ಥಿಯ ಥಳಿಸಿದ ಶಿಕ್ಷಕ; ಹರಿದಾಡಿದ ವಿಡಿಯೊ

Published:
Updated:

ಬೆಂಗಳೂರು: ನಗರದ ಶಾಲೆಯೊಂದರಲ್ಲಿ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಮನಬಂದಂತೆ ಥಳಿಸಿದ್ದು, ಅದರ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಶುಕ್ರವಾರ ಹರಿದಾಡಿತು.

ರಾಜಾಜಿನಗರದಲ್ಲಿರುವ ಶಾಲೆಯೊಂದರಲ್ಲಿ ನಡೆದಿದೆ ಎನ್ನಲಾದ ಘಟನೆಯನ್ನು ವಿದ್ಯಾರ್ಥಿಗಳೇ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ. ಅದನ್ನು ಹಲವರು ಶೇರ್ ಮಾಡಿದ್ದು, ಶಿಕ್ಷಕನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ವಿಡಿಯೊ ಗಮನಿಸಿದ್ದ ರಾಜಾಜಿನಗರ ಪೊಲೀಸರು, ತಮ್ಮ ವ್ಯಾಪ್ತಿಯ ಶಾಲೆ ಹಾಗೂ ಕಾಲೇಜುಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

‘ಘಟನೆ ಬಗ್ಗೆ ಇದುವರೆಗೂ ಯಾವುದೇ ದೂರು ನೀಡಿಲ್ಲ’ ಎಂದು ಪೊಲೀಸರು ತಿಳಿಸಿದರು.

ಪ್ರತಿಕ್ರಿಯಿಸಿ (+)