ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಹಬ್ಬದ ಬಳಿಕ ರಾಜಕಾಲುವೆ ಒತ್ತುವರಿ ತೆರವು ಮತ್ತೆ ಆರಂಭ’

Last Updated 3 ಅಕ್ಟೋಬರ್ 2022, 21:26 IST
ಅಕ್ಷರ ಗಾತ್ರ

ಬೆಂಗಳೂರು: ‌‌‌‌‌‌‌‌‘ರಾಜಕಾಲುವೆ ಒತ್ತುವರಿ ತೆರವು ಕಾರ್ಯಾಚರಣೆ ಹಬ್ಬ ಮುಗಿದ ಬಳಿಕ ಮತ್ತೆ ಆರಂಭವಾಗಲಿದೆ. ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ’ ಎಂದು ಕಂದಾಯ ಸಚಿವ ಆರ್‌. ಅಶೋಕ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ನಗರದ ಪೂರ್ವ ಭಾಗದಲ್ಲಿ ತೆರವು ಕಾರ್ಯಾಚರಣೆ ಮುಂದುವರಿಸುತ್ತೇವೆ. ಒತ್ತುವರಿ ಮಾಡಿದವರು ‌ಎಷ್ಟೇ ದೊಡ್ಡವರಿದ್ದರೂ ತೆರವುಗೊಳಿಸುವುದು ಖಚಿತ’ ಎಂದರು.

‌‘ಮಳೆ ಬಂದಾಗ ನಗರದ ಜನರಿಗೆ ಬಹಳ ತೊಂದರೆಯಾಗಿತ್ತು. ಈ ಬಗ್ಗೆ ಬಿಬಿಎಂಪಿ, ಕಂದಾಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ ಮಳೆ ಬಂದಾಗ ಇಂಥ ಸಮಸ್ಯೆ ಆಗಲೇಬಾರದೆಂದು ಸೂಚನೆ ನೀಡುತ್ತೇನೆ. ಸರ್ವೇಯರ್‌ಗಳು ಮತ್ತು ಎಂಜಿನಿಯರ್‌ಗಳು ಒಟ್ಟಾಗಿ ಕೆಲಸ ಮಾಡಬೇಕು. ರಾಜಕಾಲುವೆ ಒತ್ತುವರಿಯನ್ನು ತೆರವುಗೊಳಿಸಲು ತ್ವರಿತ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುತ್ತೇನೆ’ ಎಂದರು.

‘ಈಗಾಗಲೇ ಒಂದು ಸುತ್ತಿನ ತೆರವು ಕಾರ್ಯಾಚರಣೆ ನಡೆದಿದೆ. ಈಗ ಆಯುಧ ಪೂಜೆ ಇರುವುದರಿಂದ ಕಾರ್ಮಿಕರು ಸೇರಿ ತೆರವು ಕಾರ್ಯಾಚರಣೆಯಲ್ಲಿ ಭಾಗವಹಿಸುವವರು ಊರಿಗೆ ಹೋಗಿದ್ದಾರೆ. ಹೀಗಾಗಿ, ಹಬ್ಬ ಮುಗಿದ ಬಳಿಕ ಮತ್ತೊಂದು ಸುತ್ತಿನ ಕಾರ್ಯಾಚರಣೆ ನಡೆಯಲಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT