ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಲಾ, ರಾಮಕ್ಕಗೆ ‘ರಾಜಲಕ್ಷ್ಮಿ ಬರಗೂರು ಪ್ರಶಸ್ತಿ’

Published 8 ಮಾರ್ಚ್ 2024, 15:39 IST
Last Updated 8 ಮಾರ್ಚ್ 2024, 15:39 IST
ಅಕ್ಷರ ಗಾತ್ರ

ಬೆಂಗಳೂರು: ನಾಡೋಜ ಡಾ. ಬರಗೂರು ಪ್ರತಿಷ್ಠಾನ ನೀಡುವ ‘ರಾಜಲಕ್ಷ್ಮಿ ಬರಗೂರು ಪ್ರಶಸ್ತಿ’ಗೆ ಕಲಬುರಗಿಯ ಸಾಮಾಜಿಕ ಹೋರಾಟಗಾರ್ತಿ ಕೆ. ನೀಲಾ ಹಾಗೂ ತುಮಕೂರಿನ ಅಲೆಮಾರಿ ಜನಾಂಗದ ಹೋರಾಟಗಾರ್ತಿ ರಾಮಕ್ಕ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ತಲಾ ₹10 ಸಾವಿರ ನಗದು ಒಳಗೊಂಡಿದೆ. ಪ್ರತಿಷ್ಠಾನವು ಪ್ರತಿ ವರ್ಷ ಬರಗೂರು ರಾಮಚಂದ್ರಪ್ಪ ಅವರ ದಿವಂಗತ ಪತ್ನಿ ರಾಜಲಕ್ಷ್ಮಿ ಬರಗೂರು ಅವರ ಹೆಸರಿನಲ್ಲಿ ಇಬ್ಬರು ಮಹಿಳಾ ಸಾಧಕರಿಗೆ ಪ್ರಶಸ್ತಿಯನ್ನು ನೀಡುತ್ತಿದೆ. 

ಇದೇ 12ರಂದು ಸಂಜೆ 5 ಗಂಟೆಗೆ ಇಲ್ಲಿನ ಸರ್ಕಾರಿ ಕಲಾ ಕಾಲೇಜಿನ ಸಭಾಂಗಣದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ. ನಟಿ ಹಾಗೂ ವಿಧಾನ ಪರಿಷತ್ತಿನ ಸದಸ್ಯೆ ಉಮಾಶ್ರೀ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಕೀಲ ಸಿ.ಎಚ್. ಹನುಮಂತರಾಯ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಲಕ್ಷ್ಮೀನಾರಾಯಣ ಎ.ವಿ. ತಿಳಿಸಿದ್ದಾರೆ.

ರಾಮಕ್ಕ    
ರಾಮಕ್ಕ    

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT