ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಾನುಕುಂಟೆ ಗ್ರಾಮ ಪಂಚಾಯಿತಿ: ಸಮಗ್ರ ಯೋಜನೆಗೆ ರಾಷ್ಟ್ರ ಮನ್ನಣೆ

Last Updated 24 ಏಪ್ರಿಲ್ 2021, 14:02 IST
ಅಕ್ಷರ ಗಾತ್ರ

ಹೆಸರಘಟ್ಟ: ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲ್ಲೂಕಿನ ಹೆಸರಘಟ್ಟ ಹೋಬಳಿಯ ರಾಜಾನುಕುಂಟೆ ಗ್ರಾಮ ಪಂಚಾಯಿತಿ ರೂಪಿಸಿದ್ದ ಅಭಿವೃದ್ಧಿ ಯೋಜನೆಗೆ ಈಗ ರಾಷ್ಟ್ರ ಮನ್ನಣೆ ದೊರೆತಿದೆ.

ಕೇಂದ್ರ ಸರ್ಕಾರ ಪಂಚಾಯತ್‌ ರಾಜ್ ದಿವಸ್ ಅಂಗವಾಗಿ ನೀಡುವ ‘ಗ್ರಾಮ ಪಂಚಾಯಿತಿ ಅಭಿವೃದ್ಧಿ ಯೋಜನೆ’ ಪ್ರಶಸ್ತಿಯನ್ನು ಈ ಗ್ರಾಮ ಪಂಚಾಯಿತಿ ಪಡೆದುಕೊಂಡಿದೆ.

‘ಗ್ರಾಮ ಪಂಚಾಯಿತಿಯು ಕೈ ಗೊಂಡಿರುವ ಜನಪರ ಯೋಜನೆಗಳನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಕುಡಿಯುವ ನೀರು, ಬೀದಿದೀಪಗಳ ನಿರ್ವಹಣೆ, ವುಗಳಿಗೆ ಸೌರ ವಿದ್ಯುತ್ ಬಳಕೆ, ಕಸ ವಿಲೇವಾರಿ, ಡಿಜಿಟಲ್ ಗ್ರಂಥಾಲಯ, ಶೈಕ್ಷಣಿಕ ಕಾರ್ಯಕ್ರಮಗಳಿಗೆ ಹೆಚ್ಚಿನ ಒತ್ತು ನೀಡಿ ಕಾರ್ಯಕ್ರಮಗಳನ್ನು ರೂಪಿಸಿದ್ದೇವೆ. ಪರಿಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಾಪನೆ, ಮಾದರಿ ಅಂಗನವಾಡಿಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದೇವೆ. ಪ್ರತಿ ಕ್ಷೇತ್ರದಲ್ಲಿ ಹೊಸ ಆಲೋಚನೆಗಳನ್ನು ಅಳವಡಿಸಿದ್ದರಿಂದ ಈ ಪ್ರಶಸ್ತಿ ನಮ್ಮ ಗ್ರಾಮ ಪಂಚಾಯಿತಿದೆ ದಕ್ಕಿದೆ’ ಎಂದು ಪಂಚಾಯಿತಿ ಅಭಿವೃದ್ದಿ ಅಧಿಕಾರಿ ರಾಜೇಶ್ ಹರ್ಷ ವ್ಯಕ್ತಪಡಿಸಿದರು.

‘ಗ್ರಾಮಸಭೆ, ಮಕ್ಕಳ ಗ್ರಾಮಸಭೆ, ಮಹಿಳಾ ಗ್ರಾಮಸಭೆಗಳನ್ನು ಸಕಾಲದಲ್ಲಿ ಆಯೋಜನೆ ಮಾಡಿ ಸರ್ಕಾರದ ಸವಲತ್ತುಗಳ ಮಾಹಿತಿಯನ್ನು ನೀಡಲಾಗಿದೆ. ಅಲ್ಲದೇ ಅಂಗವಿಕಲರಿಗೆ ಅಗತ್ಯವಾದ ಸೌಲಭ್ಯವನ್ನು ನೀಡಲು ಪಂಚಾಯಿತಿಯು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಆಂಬುಲೆನ್ಸ್‌ ಸೇವೆಯನ್ನು ಪಂಚಾಯಿತಿ ವತಿಯಿಂದ ಗ್ರಾಮಸ್ಥರಿಗೆ ಉಚಿತವಾಗಿ ನೀಡಲು ಕ್ರಮ ಕೈಗೊಂಡಿದ್ದೇವೆ. ಕೋವಿಡ್‌ ಹರಡುವ ಸಮಯದಲ್ಲಿ ಇದರಿಂದ ಬಹಳ ಪ್ರಯೋಜನವಾಗಿದೆ’ ಎಂದು ಅವರು ತಿಳಿಸಿದರು.

ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ವೀರಣ್ಣ, ‘ಗ್ರಾಮ ಪಂಚಾಯಿತಿ ಹಮ್ಮಿಕೊಂಡ ಯೋಜನೆಗಳ ಅನುಷ್ಠಾನಕ್ಕೆ ಶಾಸಕ ಎಸ್.ಆರ್.ವಿಶ್ವನಾಥ್ ಅವರೂ ಸಹಕಾರ ನೀಡಿದ್ದರು. ಗ್ರಾಮಸ್ಥರ ಸಹಕಾರ, ಜನಪ್ರತಿನಿಧಿಗಳ ಮತ್ತು ಅಧಿಕಾರಿಗಳ ಶ್ರಮದಿಂದ ಈ ಪ್ರಶಸ್ತಿ ನಮ್ಮದಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT