ಮಂಗಳವಾರ, ಡಿಸೆಂಬರ್ 1, 2020
22 °C

ಆರ್‌.ಆರ್‌.ನಗರ ಉಪಚುನಾವಣೆ; ಕೆಲವೆಡೆ ಮತಯಂತ್ರಗಳಲ್ಲಿ ದೋಷ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಅಣುಕು ಮತದಾನದಲ್ಲಿ ಒಂದಷ್ಟು ದೋಷ ಕಂಡುಬಂದಿದ್ದು ಸರಿಪಡಿಸಲಾಗಿದೆ. ಒಂಬತ್ತು ಕಂಟ್ರೋಲ್ ಯುನಿಟ್ ಬದಲಾಯಿಸಿದ್ದೇವೆ. 3 ವಿವಿ ಪ್ಯಾಡ್, 14 ಮತಯಂತ್ರಗಳನ್ನು ಬದಲಾಯಿಸಿದ್ದೇವೆ’ ಎಂದು ಬಿಬಿಎಂಪಿ ಆಯುಕ್ತ ಹಾಗೂ ಚುನಾವಣಾಧಿಕಾರಿ ಮಂಜುನಾಥ್ ಪ್ರಸಾದ್ ಹೇಳಿದರು.

‘ಕೋವಿಡ್ ಸೋಂಕಿತರಿಗೆ ಕರೆ ಮಾಡಿ ಮತದಾನ ಮಾಡುವಂತೆ ಮನವಿ ಮಾಡಿದ್ದೇವೆ. ಆ ಪೈಕಿ, 27 ಮಂದಿ ಮತ ಹಾಕಲು ಒಪ್ಪಿದ್ದಾರೆ. 12 ಸೋಂಕಿತರು ಆಸ್ಪತ್ರೆಯಲ್ಲಿ ಇದ್ದಾರೆ. ಅವರಿಗೆ ಪಿಪಿಇ ಕಿಟ್ ಹಾಕಿಸಿ ಮತ ಹಾಕಿಸುತ್ತೇವೆ’ ಎಂದೂ ಹೇಳಿದರು.

‘ಪ್ರತಿ ಮತಗಟ್ಟೆಗಳಲ್ಲಿ ಕೋವಿಡ್ ನಿಯಮ ಪಾಲಿಸಲಾಗುತ್ತಿದೆ. ಆಶಾ ಕಾರ್ಯಕರ್ತೆಯರು ಇದ್ದಾರೆ. ಸ್ಯಾನಿಟೈಸರ್ ವ್ಯವಸ್ಥೆ, ಕೈಗೆ ಗ್ಲೋಸ್ ವ್ಯವಸ್ಥೆ ಮತ್ತು ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯಗೊಳಿಸಲಾಗಿದೆ. ಪೊಲೀಸ್ ಸಿಬ್ಬಂದಿ ಕೂಡ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದಾರೆ’ ಎಂದರು.

 ಇಲ್ಲಿ  9 ಗಂಟೆ ಸುಮಾರಿಗೆ ಶೇ 9 ರಷ್ಟು ಮತದಾನವಾಗಿದೆ.

‘ಮತದಾನದ 40 ಸ್ಥಳಗಳಲ್ಲಿ ಒಂದೇ ಜಾಗದಲ್ಲಿ ಕುಳಿತು ನೋಡಬಹುದಾದ ವ್ಯವಸ್ಥೆ ಇದೆ. ಸೂಕ್ಷ್ಮ ಪ್ರದೇಶಗಳಲ್ಲಿ ಮೈಕ್ರೋ ಅಬ್ಸರ್ವರ್ ಇದ್ದಾರೆ’ ಎಂದೂ ಅವರು ವಿವರಿಸಿದರು.

ಇದನ್ನೂ ಓದಿ... ಆರ್‌.ಆರ್‌. ನಗರ: ಗೆಲ್ಲುವ ವಿಶ್ವಾಸವಿದೆ ಎಂದ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು