ಮಂಗಳವಾರ, ನವೆಂಬರ್ 24, 2020
22 °C

ರಾಜರಾಜೇಶ್ವರಿನಗರ ಠಾಣೆ ಇನ್‌ಸ್ಪೆಕ್ಟರ್ ವರ್ಗಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜರಾಜೇಶ್ವರಿ ನಗರ ಠಾಣೆ ಇನ್‌ಸ್ಪೆಕ್ಟರ್ ವಿ. ನವೀನ್ ಸುಪೇಕರ್ ಅವರನ್ನು ದಿಢೀರ್ ವರ್ಗಾವಣೆ ಮಾಡಲಾಗಿದ್ದು, ಅವರ ಜಾಗಕ್ಕೆ ಆರ್.ಪಿ. ಅನಿಲ್ ಅವರನ್ನು ವರ್ಗಾಯಿಸಲಾಗಿದೆ.

ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ನಡೆಯುತ್ತಿದೆ. ಇತ್ತೀಚೆಗೆಷ್ಟೇ ನಾಮಪತ್ರ ಸಲ್ಲಿಸುವ ವೇಳೆ ನಿಯಮ ಉಲ್ಲಂಘಿಸಿದ್ದ ಆರೋಪದಡಿ ಕಾಂಗ್ರೆಸ್ ‍ಪಕ್ಷದ ಅಭ್ಯರ್ಥಿ ಕುಸುಮಾ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ನವೀನ್ ಅವರೇ ಈ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದರು. ಇದೀಗ ಅವರನ್ನು ರಾಜ್ಯ ಗುಪ್ತದಳಕ್ಕೆ ವರ್ಗಾಯಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು