ರಾಜರಾಜೇಶ್ವರಿನಗರ: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಹೊಂದಿಕೊಂಡಂತಿರುವ ಭಾರತೀಯ ಸಾಂಖ್ಯಿಕ ಸಂಸ್ಥೆಯ ಪಕ್ಕದ ಕಿರು ಅರಣ್ಯಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದು, ಹಲವು ಮರಗಳು ಸುಟ್ಟು ಹೋಗಿವೆ.

‘ಸೋಮವಾರ ಬೆಂಕಿ ಬಿದ್ದಿದ್ದನ್ನು ಗಮನಿಸಿದ ಸ್ಥಳೀಯರು ಜಿಬಿಎಗೆ ಮಾಹಿತಿ ನೀಡಿದ್ದರು. ಬಿಜಿಎ ಅರಣ್ಯ ವಿಭಾಗ ಎಚ್ಚೆತ್ತುಕೊಳ್ಳುವ ಹೊತ್ತಿಗೆ ಮರಗಳು ಬೆಂಕಿಗೆ ಆಹುತಿಯಾಗಿದ್ದವು’ ಎಂದು ಸ್ಥಳೀಯರು ತಿಳಿಸಿದರು.

‘ಈ ಕಿರು ಅರಣ್ಯ ವ್ಯಾಪ್ತಿಯಲ್ಲಿ ಆಗಾಗ ಬೆಂಕಿ ಹಚ್ಚಿ ಮರಗಳನ್ನು ಸುಟ್ಟು ಹಾಕುವುದು ನಡೆಯುತ್ತಿದ್ದರೂ ತಡೆಗಟ್ಟುವ ಕೆಲಸ ಆಗುತ್ತಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ಅಧಿಕಾರಿಗಳು ಕೈಗೊಳ್ಳುತ್ತಿಲ್ಲ. ಬೇಸಿಗೆ ಇರುವುದರಿಂದ ಈ ಬಗ್ಗೆ ಗಮನ ಹರಿಸಬೇಕು’ ಎಂದು ಸ್ಥಳೀಯರಾದ ರಾಜಶೇಖರ್ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.