ಬೆಂಗಳೂರು: ಕೈಕಾಲು ಕಟ್ಟಿ ಯುವಕನೊಬ್ಬನನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು, ಪ್ಲಾಸ್ಟಿಕ್ ಚೀಲದಲ್ಲಿ ಮೃತದೇಹವನ್ನು ಸುತ್ತಿ ರಾಜಕಾಲುವೆ ಬಳಿ ಬಿಸಾಡಿ ಪರಾರಿಯಾಗಿದ್ದಾರೆ.

‘ದುಷ್ಕರ್ಮಿಗಳು ಯುವಕನ ಕೈಕಾಲುಗಳನ್ನು ಹಗ್ಗದಿಂದ ಕಟ್ಟಿದ್ದಾರೆ. ಬಾಯಿ ಹಾಗೂ ಮೂಗಿಗೆ ಪ್ಲಾಸ್ಟರ್ ಸುತ್ತಲಾಗಿದೆ. ಮೃತ ಯುವಕನಿಗೆ ಸುಮಾರು 25 ವರ್ಷ ವಯಸ್ಸಾಗಿರಬಹುದು. ಆತನ ಹೆಸರು ಮತ್ತು ವಿಳಾಸ ಗೊತ್ತಾಗಿಲ್ಲ. ಕುತ್ತಿಗೆ ಬಿಗಿದು ಕೊಲೆ ಮಾಡಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

‘ಬೇರೆ ಕಡೆ ಕೊಲೆ ಮಾಡಿ ಮೃತದೇಹವನ್ನುಠಾಣೆ ವ್ಯಾಪ್ತಿಯ ಡಿಸೋಜ ನಗರದ ರಾಜಕಾಲುವೆ ಬಳಿ ಬಿಸಾಡಿ ಹೋಗಿರುವ ಶಂಕೆ ಇದೆ. ಮಂಗಳವಾರ ಬೆಳಿಗ್ಗೆ ಚಿಂದಿ ಆಯುವ ವ್ಯಕ್ತಿಯೊಬ್ಬರು ಗೋಣಿಚೀಲ ಬಿದ್ದಿರುವುದನ್ನು ಕಂಡು ಸ್ಥಳೀಯರಿಗೆವಿಷಯ ತಿಳಿಸಿದ್ದಾರೆ. ಅವರು ಠಾಣೆಗೆ ಮಾಹಿತಿ ನೀಡಿದ ಬಳಿಕ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಲಾಗಿತ್ತು. ಚೀಲ ತೆಗೆದು ನೋಡಿದಾಗ ಅದರಲ್ಲಿ ಮೃತದೇಹ ಪತ್ತೆಯಾಗಿತ್ತು’ ಎಂದು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.