ರಾಜರಾಜೇಶ್ವರಿನಗರ: ಮುಖ್ಯಮಂತ್ರಿ ಯಾಗಿ ಡಿ.ಕೆ.ಶಿವಕುಮಾರ್ ಅವರು ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು 100 ಅಡಿ ಕಟೌಟ್ ನಿಲ್ಲಿಸಿ, ಪಟಾಕಿ ಸಿಡಿಸಿ ಉತ್ಸವ ಆಚರಿಸಿದರು.

ಮಾಗಡಿ ರಸ್ತೆಯ ಸುಮನಹಳ್ಳಿ ವೃತ್ತದಲ್ಲಿ ಶಿವಕುಮಾರ್ ಕಟೌಟ್ಗೆ ವಿವಿಧ ಹೂವುಗಳಿಂದ ಶೃಂಗರಿಸಲಾಗಿತ್ತು. ಕಾರ್ಯಕರ್ತರು ಸಡಗರ, ಸಂಭ್ರಮದಿಂದ ವಿವಿಧ ಬಣ್ಣ ಬಣ್ಣದ ಹೂವುಗಳನ್ನು ಎರಚಿದರು.

ಸುಮನಹಳ್ಳಿ ಜಂಕ್ಷನ್ನಲ್ಲಿ ಬೃಹತ್ ಎಲ್ಇಡಿ ಸ್ಕ್ರೀನ್ ಅಳವಡಿಸಿ ಪ್ರಮಾಣವಚನ ಕಾರ್ಯಕ್ರಮ ವೀಕ್ಷಿಸಲು ಅನುವು ಮಾಡಿಕೊಡಲಾಗಿತ್ತು. ಕೆಪಿಸಿಸಿ ವಕ್ತಾರೆ ಎಚ್.ಕುಸುಮಾ ಅವರ ಅಭಿಮಾನಿಗಳು ಅಲ್ಲಲ್ಲಿ ಪೆಂಡಲ್ ಹಾಕಿ ಕುಡಿಯುವ ನೀರು, ತಂಪು ಪಾನೀಯ ವ್ಯವಸ್ಥೆ ಮಾಡಿದ್ದರು.

ಕುಸುಮಾ ಮಾತನಾಡಿ, ‘ಅಭಿವೃದ್ದಿಯ ಚಿಂತಕರು, ಎಲ್ಲ ವರ್ಗದ ಬಡವರು, ಶ್ರಮಿಕರು, ಕಾರ್ಮಿಕರು, ರೈತರ ಸಮಸ್ಯೆ, ನೋವು ನಲಿವನ್ನು ಕಂಡಿರುವ ಪಕ್ಷದ ನಿಷ್ಟಾವಂತರನ್ನು ಗುರುತಿಸುವ ಶಿವಕುಮಾರ್ ಅವರು ರಾಜ್ಯವನ್ನು ಅಭಿವೃದ್ದಿಯತ್ತ ಕೊಂಡೊ ಯ್ಯುವ ಕೆಲಸ ಮಾಡಲಿದ್ದಾರೆ’ ಎಂದರು.

ಕಾಂಗ್ರೆಸ್ ಮುಖಂಡ ಕೊಟ್ಟಿಗೆಪಾಳ್ಯ ಎನ್.ಶೇಖರ್, ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹನುಮಂತರಾಯಪ್ಪ, ಲಗ್ಗೆರೆ ಪಾಲಿಕೆ ಮಾಜಿ ಸದಸ್ಯೆ ರೂಪ ಲಿಂಗೇಶ್ವರ್, ಕಾಂಗ್ರೆಸ್ ಮುಖಂಡರಾದ ಕೆ.ಗಿರೀಶ್ಗೌಡ, ಮುರಳಿ ಪ್ರೇಮ್, ಪಶ್ಚಿಮ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಎಲ್.ಪ್ರವೀಣ್ ಕುಮಾರ್, ಎನ್.ಎಸ್.ಯು.ಐ ಆರ್.ಆರ್. ನಗರ ಕ್ಷೇತ್ರದ ಅಧ್ಯಕ್ಷ ಚರಣ್ಗೌಡ, ಲಗ್ಗೆರೆಯ ರಮೇಶ್ಗೌಡ,ವಾರ್ಡ್ ಅಧ್ಯಕ್ಷ ಚೇತನ್ ಉಪಸ್ಥಿತರಿದ್ದರು.

ರಾಜರಾಜೇಶ್ವರಿ ನಗರ, ಬಂಗಾರಪ್ಪ ನಗರ, ಐಡಿಯಲ್ ಹೋಮ್ಸ್, ಬೆಮೆಲ್ ಬಡಾವಣೆಯಲ್ಲಿ ಕಾಂಗ್ರೆಸ್ ಮುಖಂಡ ರಾಜೇಶ್ ಗೂಳಿಗೌಡ ನೇತೃತ್ವದಲ್ಲಿ ವಿವಿಧೆಡೆ ಪಟಾಕಿ ಸಿಡಿಸಿ,ಸಿಹಿ ಹಂಚಿ ಅದ್ದೂರಿಯಾಗಿ ಸಂಭ್ರಮಾಚರಣೆ ಆಚರಿಸಿದರು.

ಗ್ಲೋಬಲ್ ನಂದೀಶ್, ಕೆಪಿಸಿಸಿ ಹಿಂದುಳಿದ ವಿಭಾಗದ ಉಪಾಧ್ಯಕ್ಷ ಶ್ರೀಕಾಂತ್, ಬಂಗಾರಪ್ಪನಗರದ ಶಿವನಂಜಯ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-4-1017004333

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.