ಶನಿವಾರ, ಫೆಬ್ರವರಿ 27, 2021
28 °C

ಶೀಘ್ರವೆ ಪ್ರತ್ಯೇಕ ಸಭೆ ಕರೆಯುವೆ: ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Deccan Herald

ಬೆಂಗಳೂರು: ‘ಸೌಹಾರ್ದ ಸಂಯುಕ್ತ ಸಹಕಾರಿಯ ಬೇಡಿಕೆಗಳ ಕುರಿತು ಚರ್ಚಿಸಲು ಶೀಘ್ರವೆ ಪ್ರತ್ಯೇಕ ಸಭೆ ಕರೆಯುವೆ’ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ ಹೇಳಿದರು. 

ರಾಜ್ಯ ಸೌಹಾರ್ದ ಸಂಯುಕ್ತ ಸಹಕಾರಿ ನಗರದಲ್ಲಿ ಶುಕ್ರವಾರ ಆಯೋಜಿಸಿದ್ದ ಸಚಿವ– ಶಾಸಕರಿಗೆ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.  

‘ಸಹಾಕಾರಿ ಕ್ಷೇತ್ರ ಹೆಚ್ಚೆಚ್ಚು ಅಭಿವೃದ್ಧಿ ಹೊಂದಲು ಮುಂಬರುವ ದಿನಗಳಲ್ಲಿ ಏನೇನು ಅನುಕೂಲತೆಗಳು ಬೇಕೊ, ಅವುಗಳನ್ನು ಮಾಡಿಕೊಡಲು ಸರ್ಕಾರ ಬದ್ಧವಾಗಿದೆ’ ಎಂದು ಭರವಸೆ ನೀಡಿದರು. 

‘ಸಹಕಾರಿ ಕ್ಷೇತ್ರ ಅಧಿಕಾರಿಗಳ ಕಪಿಮುಷ್ಠಿಯಿಂದ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಸರ್ಕಾರ ಅನುಕೂಲ ಮಾಡಿಕೊಡಬೇಕು. ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳಲ್ಲಿನ ಕೃಷಿಕರ ಸಾಲ ಮನ್ನಾ ಬಗ್ಗೆ ಕ್ಯಾಬಿನೆಟ್‌ನಲ್ಲಿ ಅಧಿಸೂಚನೆ ಹೊರಡಿಸಿದ್ದರೂ, ಇನ್ನೂ ಸಾಲಮನ್ನಾ ಆಗುತ್ತಿಲ್ಲ. ಈ ಬಗ್ಗೆ ತಕ್ಷಣ ಕ್ರಮಕೈಗೊಳ್ಳಬೇಕು. ಸಹಕಾರಿ ಸಂಘಗಳಲ್ಲಿನ ಸಾಲಮನ್ನಾದ ಹಣವನ್ನು ಸರ್ಕಾರ ಕೂಡಲೇ ಪಾವತಿಸಬೇಕು’ ಎಂದು ಶಾಸಕ ಅರಗ ಜ್ಞಾನೇಂದ್ರ ಒತ್ತಾಯಿಸಿದರು. 

‘ಸಹಕಾರಿ ಕ್ಷೇತ್ರದಲ್ಲಿ ವೃತ್ತಿಪರತೆ ಬರಬೇಕು. ಅಧ್ಯಕ್ಷ ಮತ್ತು ಆಡಳಿತ ಮಂಡಲಿಯ ನಡುವೆ ಹೊಂದಾಣಿಕೆ ಇದ್ದಾಗ ಮಾತ್ರ ಸಹಕಾರಿ ಸಂಸ್ಥೆಗಳ ಅಭಿವೃದ್ಧಿ ಸಾಧ್ಯ’ ಎಂದು ಸಚಿವ ವೆಂಕಟರಾವ್‌ ನಾಡಗೌಡ ಹೇಳಿದರು. 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.