ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯೋತ್ಸವ ಆಚರಣೆ: 100 ಜನರ ಮಿತಿ

ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ
Last Updated 30 ಅಕ್ಟೋಬರ್ 2020, 19:41 IST
ಅಕ್ಷರ ಗಾತ್ರ

ಬೆಂಗಳೂರು: ಕನ್ನಡ ರಾಜ್ಯೋತ್ಸವ ಆಚರಣೆಯ ಕಾರ್ಯಕ್ರಮಗಳಿಗೆ ಗರಿಷ್ಠ 100 ಜನರು ಮಾತ್ರ ಪಾಲ್ಗೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಮೆರವಣಿಗೆ ನಡೆಸುವುದನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

‘ಧ್ವಜಾರೋಹಣ ಸ್ಥಳದಲ್ಲಿ ಅಂತರ ಕಾಯ್ದುಕೊಳ್ಳುವುದು, ಮಾಸ್ಕ್‌ ಧರಿಸುವುದು ಮತ್ತು ಸ್ಯಾನಿಟೈಸರ್‌ ಬಳಕೆ ಕಡ್ಡಾಯ. 100ಕ್ಕಿಂತ ಹೆಚ್ಚು ಜನರು ರಾಜ್ಯೋತ್ಸವ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತಿಲ್ಲ. ಚಿಕ್ಕ ವಯಸ್ಸಿನ ಮಕ್ಕಳು, ಹಿರಿಯ ನಾಗರಿಕರು ಮತ್ತು ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವವರು ಭಾಗವಹಿಸದಂತೆ ಎಚ್ಚರಿಕೆ ವಹಿಸಬೇಕು’ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್ ಅವರು ಶುಕ್ರವಾರ ಹೊರಡಿಸಿರುವ ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮ ಆಯೋಜಿಸುವವರು ಸ್ಥಳೀಯ ಸಂಸ್ಥೆಗಳು, ಪೊಲೀಸ್‌, ವಿದ್ಯುತ್‌, ಆರೋಗ್ಯ, ಅಗ್ನಿಶಾಮಕ ಸೇರಿದಂತೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆಯುವುದು ಕಡ್ಡಾಯ. ಮಾಸ್ಕ್‌ ಧರಿಸದೇ ನಡೆಸುವ ಕಾರ್ಯಕ್ರ
ಮಗಳನ್ನು ನಿಷೇಧಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT