ಬೆಂಗಳೂರು: ‘ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ರಕ್ಷಾ ರಾಮಯ್ಯ ಚುನಾವಣೆಯಲ್ಲಿ ಆಯ್ಕೆಯಾಗಿದ್ದು, ಈ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ’ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕದ ಉಸ್ತುವಾರಿ ಸುರಭಿ ದ್ವಿವೇದಿ ಸ್ಪಷ್ಟಪಡಿಸಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಗೊಂದಲಗಳ ಕುರಿತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಕಾರ್ಯಕರ್ತರಿಂದ ಮಾಹಿತಿ ಕ್ರೋಢೀಕರಿಸಿದ ಬಳಿಕ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, ಎರಡು ವಾರಗಳಿಂದ ಈ ಕುರಿತು ಉಂಟಾಗಿರುವ ಗೊಂದಲಗಳಿಗೆ ತೆರೆ ಎಳೆದರು.

‘ಪಕ್ಷದ ಆಂತರಿಕ ಸಮಸ್ಯೆಗಳನ್ನು ಪಕ್ಷದ ವೇದಿಕೆಯಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ. ಬ್ಲಾಕ್ ಕಾಂಗ್ರೆಸ್ ಘಟಕದ ಚುನಾವಣೆಯಲ್ಲಿ ಸೋತವರು ನಮ್ಮವರೇ, ಗೆದ್ದವರೂ ನಮ್ಮವರೇ. ಹಲವು ಪ್ರಮುಖ ಯುವ ನಾಯಕರು ಚುನಾವಣೆಯಲ್ಲಿ ಸೋತಿದ್ದಾರೆ. ಅವರಿಗೂ ಪಕ್ಷದ ವಿವಿಧ ಘಟಕಗಳಲ್ಲಿ ಅವಕಾಶ ಕಲ್ಪಿಸುತ್ತೇವೆ. ಎಲ್ಲರಿಗೂ ನ್ಯಾಯ ದೊರಕಿಸಿಕೊಡುವ ಪ್ರಯತ್ನ ಮಾಡಲಾಗುವುದು’ ಎಂದರು.

ಅದಕ್ಕೂ ಮೊದಲು ಅವರು, ರಾಜ್ಯದ ವಿವಿಧ ಭಾಗಗಳಿಂದ ಬಂದಿದ್ದ ಯುವ ಕಾಂಗ್ರೆಸ್ ಕಾರ್ಯಕರ್ತರಿಂದ ಚುನಾವಣೆ ನಡೆದ ವಿಧಾನದ ಬಗ್ಗೆ ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.