ಬೆಂಗಳೂರು: ಮಾನ್ಯತಾ ಟೆಕ್ ಪಾರ್ಕ್ ಬಳಿ ಸಂಭವಿಸಿದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಗ್ಬಾಸ್ ಮಾಜಿ ಸ್ಪರ್ಧಿ ರಕ್ಷಕ್ ‘ಬುಲೆಟ್’ ವಿರುದ್ಧ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಗಾಯಾಳು ವೇಣುಗೋಪಾಲ್ ಅವರ ಸ್ನೇಹಿತೆ ಅನುಷಾ ನೀಡಿದ ದೂರು ಆಧರಿಸಿ ರಕ್ಷಕ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದರು.

ರಕ್ಷಕ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಜೀಪ್ ಮತ್ತು ಬೈಕ್ ಮಧ್ಯೆ ಅಪಘಾತ ಸಂಭವಿಸಿ ಬೈಕ್ ಸವಾರ ವೇಣುಗೋಪಾಲ್ ಗಾಯಗೊಂಡಿದ್ದರು.

ಶಿಡ್ಲಘಟ್ಟದ ವೇಣುಗೋಪಾಲ್ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಸ್ನೇಹಿತೆಯ ಜೊತೆಗೆ ಥಣಿಸಂದ್ರದಿಂದ ದಾಸರಹಳ್ಳಿ ಕಡೆಗೆ ಮಾನ್ಯತಾ ಟೆಕ್ ಪಾರ್ಕ್ ಮೂಲಕ ಬೈಕ್ನಲ್ಲಿ ಹೋಗುತ್ತಿದ್ದರು. ಈ ವೇಳೆ ಎದುರಿನಿಂದ ಬಂದ ರಕ್ಷಕ್ ಅವರ ಜೀಪ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿತ್ತು. ಅಪಘಾತದ ತೀವ್ರತೆಗೆ ವೇಣುಗೋಪಾಲ್ ಅವರ ಎಡಗಾಲಿನ ಮೂಳೆ ಮುರಿತವಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.