ಬೆಂಗಳೂರು: ‘ಬಿಗ್ಬಾಸ್’ ಮಾಜಿ ಸ್ಪರ್ಧಿ ರಕ್ಷಕ್ ‘ಬುಲೆಟ್’ ಅವರಿದ್ದ ಕಾರು ಹಾಗೂ ಬೈಕ್ ನಡುವೆ ಮಾನ್ಯತಾ ಟೆಕ್ಪಾರ್ಕ್ ಬಳಿ ಗುರುವಾರ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಗಾಯಗೊಂಡಿದ್ದಾರೆ.

ಶಿಡ್ಲಘಟ್ಟದ ವೇಣುಗೋಪಾಲ ಅವರ ಕಾಲು ಮುರಿದಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾನ್ಯತಾ ಟೆಕ್ಪಾರ್ಕ್ ಬಳಿಯ ತಿರುವಿನಲ್ಲಿ ಗುರುವಾರ ಬೆಳಿಗ್ಗೆ 11.30ರ ಸುಮಾರಿಗೆ ಅಪಘಾತ ಸಂಭವಿಸಿತ್ತು.

‘ರಕ್ಷಕ್ ‘ಬುಲೆಟ್’ ಅವರು ಕಾರಿನಲ್ಲಿ ಬರುತ್ತಿದ್ದರು. ಅದೇ ರಸ್ತೆಯಲ್ಲಿ ವೇಣುಗೋಪಾಲ ಮತ್ತು ಅವರ ಸ್ನೇಹಿತೆ ಬೈಕ್ನಲ್ಲಿ ಬರುತ್ತಿದ್ದರು. ಆಗ ರಕ್ಷಕ್, ಅವರಿದ್ದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿದೆ. ಕೆಳಕ್ಕೆ ಬಿದ್ದ ವೇಣುಗೋಪಾಲ ಅವರ ಕಾಲಿಗೆ ತೀವ್ರ ಪೆಟ್ಟಾಗಿತ್ತು. ಸ್ಥಳೀಯರು ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ’ ಎಂದು ಪೊಲೀಸರು ಹೇಳಿದರು.

ಈ ಸಂಬಂಧ ಹೆಣ್ಣೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.