ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಳ ಮೀಸಲಾತಿ ವಿರುದ್ಧ ರ‍್ಯಾಲಿ: ಸಂಘಟಕರ ಮೇಲೆ ಎಫ್‌ಐಆರ್

Last Updated 14 ಜನವರಿ 2023, 20:39 IST
ಅಕ್ಷರ ಗಾತ್ರ

ಬೆಂಗಳೂರು: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಹಾಗೂ ಒಳ ಮೀಸಲಾತಿ ವಿರೋಧಿಸಿ ನಗರದಲ್ಲಿ ಪ್ರತಿಭಟನಾ ರ‍್ಯಾಲಿ ನಡೆಸಿದ್ದ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ ಪದಾಧಿಕಾರಿಗಳ ವಿರುದ್ಧ ಉಪ್ಪಾರಪೇಟೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಹೈಕೋರ್ಟ್ ಆದೇಶಗಳನ್ನು ಉಲ್ಲಂಘಿಸಿ ಜ. 10ರಂದು ಪ್ರತಿಭಟನೆ ಹಾಗೂ ಮೆರವಣಿಗೆ ನಡೆಸಲಾಗಿದೆ. ಈ ಸಂಬಂಧ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಒಕ್ಕೂಟದ ಅಧ್ಯಕ್ಷ ಎಚ್‌. ರವಿ ಮಾಕಳಿ, ಕಾರ್ಯದರ್ಶಿ ಅನಂತ್ ನಾಯಕ್, ದಾನಪಾಲ್, ಮಣಿಕಂಠ ರಾಥೋಡ್, ರಾಘವೇಂದ್ರ ನಾಯಕ್, ಕಿರಣ್ ಕುಮಾರ್ ಕೊಟ್ಟಿಗೆರೆ, ಆನಂದ್ ಏಕಲವ್ಯ, ಆದರ್ಶ ಯಲ್ಲಪ್ಪ ಹಾಗೂ ಇತರರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ’ ಎಂದು ತಿಳಿಸಿವೆ.

‘ಒಳ ಮೀಸಲಾತಿ ಪರ ಹಾಗೂ ವಿರೋಧವಾಗಿ ಎರಡು ಬಣಗಳು ಪ್ರತಿ ಭಟನೆ ಹಮ್ಮಿಕೊಳ್ಳಲು ಅನುಮತಿ ಕೋರಿದ್ದವು. ಸ್ವಾತಂತ್ರ್ಯ ಉದ್ಯಾನದ ಲ್ಲಷ್ಟೇ ಪ್ರತಿಭಟನೆ ಮಾಡುವಂತೆ ಸೂಚಿಸಿ ಹೈಕೋರ್ಟ್ ಆದೇಶವನ್ನು ಪಾಲಿಸುವಂತೆ ಎಚ್ಚರಿಸಿ ಅನುಮತಿ ನೀಡಲಾಗಿತ್ತು. ಅನುಮತಿ ನಿಯಮ ಉಲ್ಲಂಘಿಸಿದ್ದ ಕರ್ನಾಟಕ ಮೀಸ ಲಾತಿ ಸಂರಕ್ಷಣಾ ಒಕ್ಕೂಟದ ಪದಾ ಧಿಕಾರಿಗಳು, ಮೆಜೆಸ್ಟಿಕ್‌ನ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಮೆರವಣಿಗೆ ನಡೆಸಿದ್ದರು. ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಿ, ಸಾರ್ವಜನಿಕರಿಗೆ ತೊಂದರೆಯನ್ನುಂಟು ಮಾಡಿದ್ದರು. ಕಾನೂನು ಸುವ್ಯವಸ್ಥೆಗೂ ಧಕ್ಕೆ ತಂದಿದ್ದರು’ ಎಂದೂ ಪೊಲೀಸ್ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT