ಮಂಗಳವಾರ, ಆಗಸ್ಟ್ 3, 2021
21 °C

5ರಿಂದ ರಾಘವೇಶ್ವರ ಭಾರತೀ ಸ್ವಾಮೀಜಿ ಚಾತುರ್ಮಾಸ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ರಾಮಚಂದ್ರಾಪುರ ಮಠದ ರಾಘವೇಶ್ವರ ಭಾರತೀ ಸ್ವಾಮೀಜಿ ಯವರ 27ನೇ ಚಾತುರ್ಮಾಸ್ಯ ಜು.5ರಿಂದ ಸೆ.2ರವರೆಗೆ ಗೋಕರ್ಣದ ಅಶೋಕೆಯಲ್ಲಿ ನಡೆಯಲಿದೆ.

‘ಅರಿವಿನ ಹಣತೆ ಹಚ್ಚೋಣ- ವಿದ್ಯಾವಿಶ್ವ ಕಟ್ಟೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಈ ಬಾರಿ ವಿದ್ಯಾ ಚಾತುರ್ಮಾಸ್ಯವಾಗಿ ಆಚರಿಸಲಾಗು ತ್ತಿದೆ. ಕೊರೊನಾ ಸೋಂಕು ಹಿನ್ನೆಲೆ ಯಲ್ಲಿ ಭಿಕ್ಷಾಸೇವೆ ಹಾಗೂ ಪಾದಪೂಜೆ ಗಳಲ್ಲಿ ಬದಲಾವಣೆ ಮಾಡಲಾ ಗಿದೆ. ಚಾತುರ್ಮಾಸ್ಯ ವ್ರತಾರಂಭದ ದಿನ ನಡೆಯುವ ವ್ಯಾಸಪೂಜೆಗೆ ಸಮಿತಿ ಯಿಂದ ಅಧಿಕೃತ ಪತ್ರ ನೀಡಿದವರಿಗೆ ಮಾತ್ರ ಅವಕಾಶವಿರಲಿದೆ ಎಂದು ಹವ್ಯಕ ಮಹಾಮಂಡಲ ಅಧ್ಯಕ್ಷ ಆರ್.ಎಸ್.ಹೆಗಡೆ ಹರಗಿ ತಿಳಿಸಿದ್ದಾರೆ.

ವ್ಯಾಸಪೂಜೆ, ದಿನನಿತ್ಯದ ಶ್ರೀಕರಾ ರ್ಚಿತ ಪೂಜೆಯನ್ನು ಸಾಮಾಜಿಕ ಜಾಲತಾಣಗಳಲ್ಲಿ ನೇರಪ್ರಸಾರ ಮಾಡಲಾಗುತ್ತದೆ. ವೈಯಕ್ತಿಕ ಭೇಟಿಗೆ ಅವಕಾಶವಿಲ್ಲ. ಭಕ್ತರು ಆನ್‍ಲೈನ್ ಸೇವೆಗಳನ್ನು ಮಾಡಿಸಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ.

ಸಂಪರ್ಕಕ್ಕೆ ಮೊ: 9448007828 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು