ಶನಿವಾರ, ಮೇ 28, 2022
28 °C

ರಾಮಗೊಂಡನಹಳ್ಳಿ: ವೆಂಕಟೇಶ್ವರಸ್ವಾಮಿ ರಥೋತ್ಸವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪುರ: ರಾಮಗೊಂಡನಹಳ್ಳಿ ವೆಂಕಟೇಶ್ವರಸ್ವಾಮಿ ಬ್ರಹ್ಮರಥೋತ್ಸವ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.

ಉತ್ಸವ ಮೂರ್ತಿಗೆ ಹೂವಿನ ಅಲಂಕಾರ ಮಾಡಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೇರವಣಿಗೆ ಮಾಡಲಾಯಿತು. ಕಂಸಾಳೆ, ಡೊಳ್ಳುಕುಣಿತ, ತಮಟೆ, ಮಂಗಳವಾದ್ಯ ಸಹಿತ ಕಲಾ ತಂಡಗಳ ನೃತ್ಯ ಪ್ರದರ್ಶನ ನೆರೆದಿದ್ದ ಭಕ್ತರ ಆಕರ್ಷಣೆಯಾಗಿತ್ತು.

ವರ್ತೂರು, ವೈಟ್‌ಫೀಲ್ಡ್, ಸಿದ್ದಾಪುರ, ತೂಬರಹಳ್ಳಿ, ನಲ್ಲೂರಹಳ್ಳಿ, ವರ್ತೂರು ಕೊಡಿ ಸೇರಿ ಸುತ್ತಮುತ್ತಲ ಹಳ್ಳಿಗಳ ಜನ  ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಭಕ್ತರಿಗೆ ಅನ್ನ ದಾಸೋಹ, ಪಾನಕ, ಮಜ್ಜಿಗೆ ವಿತರಿಸಲಾಯಿತು.

ಶಾಸಕ ಅರವಿಂದ ಲಿಂಬಾವಳಿ, ಪಾಲಿಕೆ ಮಾಜಿ ಸದಸ್ಯ ಉದಯಕುಮಾರ್, ಮುಖಂಡರಾದ ವೇಣುಗೋಪಾಲ, ನಾರಾಯಣಸ್ವಾಮಿ, ರಾಜೇಶ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.