ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಖಚಿತ: ರಾಹುಲ್‌ ಗಾಂಧಿ

Last Updated 29 ಏಪ್ರಿಲ್ 2018, 12:57 IST
ಅಕ್ಷರ ಗಾತ್ರ

ನವದೆಹ‌ಲಿ: 2019ರಲ್ಲಿ ನಡೆಯುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವು ಖಚಿತ ಎಂದು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ದೆಹಲಿಯಲ್ಲಿ ನಡೆದ ‘ಜನಾಕ್ರೋಶ ರ‍್ಯಾಲಿ’ಯಲ್ಲಿ ಭಾನುವಾರ ಅವರು ಮಾತನಾಡಿದರು.

‘ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವ ಮುನ್ನ ಜನರಿಗೆ ನೀಡಿದ್ದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲರಾಗಿದ್ದಾರೆ’ ಎಂದು ವಾಗ್ದಾಳಿ ನಡೆಸಿದರು.

ಕಳೆದ ವರ್ಷ ನಡೆದ ಗುಜರಾತ್‌ ವಿಧಾನಸಭಾ ಚುನಾವಣೆಯಲ್ಲಿ ನಮ್ಮ ನಿರೀಕ್ಷೆತಂತೆ ಫಲಿತಾಂಶ ದೊರೆಯಿತು. ಆದೇ ರೀತಿ ಮುಂಬರುವ ಮಧ್ಯಪ್ರದೇಶ, ಕರ್ನಾಟಕ, ರಾಜಸ್ಥಾನ ವಿಧಾನಸಭಾ ಚುನಾವಣೆಗಳಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸುವ ಮೂಲಕ ಕೇಂದ್ರದಲ್ಲಿ ಮತ್ತೆ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದರು.

‘ನಾನು ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿ ರೈತರ ಸಾಲ ಮನ್ನಾ ಮಾಡುವಂತೆ ಮನವಿ ಮಾಡಿದೆ. ಆದರೆ ಸಾಲ ಮನ್ನಾ ಮಾಡಿದರೆ ದೇಶದ ಅರ್ಥ ವ್ಯವಸ್ಥೆ ಹಾಳಾಗುತ್ತೆ ಎಂದು ಹೇಳುತ್ತಾರೆ’ ಎಂದು ಕಿಡಿಕಾರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT