ಶನಿವಾರ, 5 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ‘ಸ್ಮಾರ್ಟ್‌ ತಂಗುದಾಣ’ಕ್ಕೆ ರಾಮಲಿಂಗಾರೆಡ್ಡಿ ಚಾಲನೆ

Published : 2 ಅಕ್ಟೋಬರ್ 2024, 14:43 IST
Last Updated : 2 ಅಕ್ಟೋಬರ್ 2024, 14:43 IST
ಫಾಲೋ ಮಾಡಿ
Comments

ಬೆಂಗಳೂರು: ಕೆ.ಆರ್. ವೃತ್ತದ ನೃಪತುಂಗ ರಸ್ತೆಯಲ್ಲಿ ನಿರ್ಮಿಸಿರುವ ‘ಸ್ಮಾರ್ಟ್‌ ತಂಗುದಾಣ’ವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಬುಧವಾರ ಉದ್ಘಾಟಿಸಿದರು.

ಸೇಪಿಯನ್ಸ್‌ ಇಂಡಿಯಾ ಎಂಬ ಬಹುರಾಷ್ಟ್ರೀಯ ಕಂಪನಿಯ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕಾ ನಿಧಿ (ಸಿಎಸ್‌ಆರ್‌) ಅಡಿಯಲ್ಲಿ ಶಿಲ್ಪಾ ಫೌಂಡೇಶನ್‌ ಸಹಯೋಗದಲ್ಲಿ ನಿರ್ಮಿಸಿರುವ ಅತ್ಯಾಧುನಿಕ ಹಾಗೂ ಸುಸಜ್ಜಿತ ‘ಸ್ಮಾರ್ಟ್‌ ತಂಗುದಾಣ’ವನ್ನು ರಾಮಲಿಂಗಾರೆಡ್ಡಿ ಅವರ ಮೂಲಕ ಬಿಬಿಎಂಪಿಗೆ ಹಸ್ತಾಂತರಿಸಲಾಯಿತು.

ನಂತರ ಮಾತನಾಡಿದ ಸಚಿವರು, ‘ಸೇಪಿಯನ್ಸ್‌ ಹಾಗೂ ಶಿಲ್ಪಾ ಫೌಂಡೇಶನ್‌ ನಿರ್ಮಿಸಿರುವ ಸ್ಮಾರ್ಟ್‌ ತಂಗುದಾಣವು ಹಲವಾರು ಸೌಲಭ್ಯಗಳಿಂದ ಕೂಡಿದ್ದು, ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಇಲ್ಲಿ ಚಾರ್ಜಿಂಗ್‌ ಪಾಯಿಂಟ್‌, ಸ್ಯಾನಿಟರಿ ಪ್ಯಾಡ್ ವೆಂಡಿಂಗ್‌ ಮಷಿನ್‌ ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒಳಗೊಂಡಿದೆ. ಇದನ್ನು ಸಾರ್ವಜನಿಕರು ಉತ್ತಮ ರೀತಿಯಲ್ಲಿ ಬಳಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಈ ತಂಗುದಾಣವು ಇತರೆ ತಂಗುದಾಣಗಳಿಗಿಂತ ವಿಭಿನ್ನವಾಗಿದ್ದು, ಮಹಿಳೆಯ ಸುರಕ್ಷತೆಗೆ ಹೆಚ್ಚು ಆದ್ಯತೆ ನೀಡಿದೆ. ಮಹಿಳೆಯರು ತುರ್ತು ಸಂದರ್ಭದಲ್ಲಿ ಇಲ್ಲಿರುವ ಪ್ಯಾನಿಕ್‌ ಬಟನ್‌ ಒತ್ತಿದರೆ ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ರವಾನೆಯಾಗಲಿದೆ. ಕೆಲವೇ ನಿಮಿಷಗಳಲ್ಲಿ ಪೊಲೀಸ್‌ ಸಿಬ್ಬಂದಿ ಸ್ಥಳಕ್ಕೆ ಬರುತ್ತಾರೆ. ಸಿಸಿಟಿವಿ ಕ್ಯಾಮೆರಾ ಅಳವಡಿಸಿರುವುದರಿಂದ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟಲು ಇದು ಸಹಕಾರಿ ಆಗಲಿದೆ. ಇಂತಹ ಯೋಜನೆಗಳು ನಗರದಾದ್ಯಂತ ವಿಸ್ತರಣೆಯಾಗಲಿ’ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಸೇಪಿಯನ್ಸ್ ಸಂಸ್ಥೆಯ ಸುರಜೀತ್ ಬಸು, ರಾಜೇಶ್ ಕೆಂಕೆರೆ, ಸುಶೀಲ್ ಮಹಲ, ಗಿರೀಶ್ ಕುಮಾರ್, ಶಿಲ್ಪಾ ಫೌಂಡೇಶನ್ ಸಂಸ್ಥಾಪಕರಾದ ಅಚ್ಯುತ್ ಗೌಡ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT