ಬೆಂಗಳೂರು: ಕಾರ್ಯದೊತ್ತಡ ನಿರ್ವಹಣೆ ಮತ್ತು ಆರೋಗ್ಯ ಕಾಪಾಡಿಕೊಳ್ಳಲು ನೌಕರರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.

ಕೆಎಸ್ಆರ್ಟಿಸಿ ಅಧಿಕಾರಿಗಳು, ನೌಕರರ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಗುರುವಾರ ಶಟಲ್ ಬ್ಯಾಡ್ಮಿಂಟನ್, ಕೇರಂ, ಚೆಸ್ ಮತ್ತು ಟೇಬಲ್ ಟೆನಿಸ್ ಆಡುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.

ಪ್ರತಿ ವರ್ಷವು ಕೆಎಸ್ಆರ್ಟಿಸಿ ಘಟಕ, ವಿಭಾಗ, ಪ್ರಾದೇಶಿಕ ಕಾರ್ಯಾಗಾರ ಮತ್ತು ಕೇಂದ್ರ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ, ನೌಕರರು ಹಾಗೂ ಅವರ ಮಕ್ಕಳಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗುತ್ತಿದೆ. ಈ ಸಂಬಂಧ ಕ್ರೀಡಾ ಮತ್ತು ಸಾಂಸ್ಕೃತಿಕ ನಿಧಿಯಿಂದ ತಲಾ ₹ 40 ಸಾವಿರದಂತೆ 17 ವಿಭಾಗಗಳಿಗೆ ಎರಡು ಕಾರ್ಯಾಗಾರಗಳಿಗೆ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.

ಕಳೆದ ವರ್ಷವಷ್ಟೇ ಕೆಎಸ್ಆರ್ಟಿಸಿ ಕ್ರೀಡಾ ಸಂಕೀರ್ಣವನ್ನು ಮೇಲ್ದರ್ಜೆಗೇರಿಸಲಾಗಿತ್ತು. ನೌಕರರು ವಿರಾಮದ ಅವಧಿಯಲ್ಲಿ ಬಳಸಿಕೊಳ್ಳುತ್ತಿದ್ದಾರೆ ಎಂದು ಮಾಹಿತಿ ನೀಡಿದರು.

ಚೆಸ್, ಕೇರಂ, ಶಟಲ್ ಬ್ಯಾಡ್ಮಿಂಟನ್, ಟೇಬಲ್ ಟೆನಿಸ್, ಸಂಗೀತ ಸ್ಪರ್ಧೆಗಳು, ಗುಂಡು ಎಸೆತ, ವೇಗದ ನಡಿಗೆ, ಮಡಕೆ ಒಡೆಯುವ ಸ್ಪರ್ಧೆಗಳನು ನಡೆದವು.

ಕೆಎಸ್ಆರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷ, ನಿರ್ದೇಶಕರಾದ ನಂದಿನಿ ದೇವಿ ಕೆ., ಇಬ್ರಾಹಿಂ ಮೈಗೂರ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.