ಭಾನುವಾರ, ಜುಲೈ 25, 2021
28 °C

ಅಪಘಾತದಲ್ಲಿ ಬೆಂಗಳೂರು ಹೆಡ್ ಕಾನ್‌ಸ್ಟೆಬಲ್ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕನಕಪುರದ ದೊಡ್ಡ ಆಲದಹಳ್ಳಿ ಬಳಿ ಶನಿವಾರ ಅಪಘಾತ ಸಂಭವಿಸಿದ್ದು, ಬೆಂಗಳೂರಿನ ಕೋಣನಕುಂಟೆ ಠಾಣೆ ಹೆಡ್‌ ಕಾನ್‌ಸ್ಟೆಬಲ್ ಕೆ.ಆರ್. ಕುಮಾರ್ (38) ಎಂಬುವರು ಮೃತಪಟ್ಟಿದ್ದಾರೆ.

ಕನಕಪುರದವರಾಗಿದ್ದ ಕುಮಾರ್, 2005ರಲ್ಲಿ ಪೊಲೀಸ್ ಇಲಾಖೆ ಸೇರಿದ್ದರು. ಅವರಿಗೆ ಪತ್ನಿ ಇದ್ದಾರೆ. ಅಪಘಾತ ಸಂಬಂಧ ಸಾತನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಲವು ಅಪರಾಧ ಪ್ರಕರಣಗಳನ್ನು ಭೇದಿಸುವಲ್ಲಿ ಕುಮಾರ್ ಅವರು ಪ್ರಮುಖ ಪಾತ್ರ ವಹಿಸಿದ್ದರು. ಅಪರಾಧ ಪ್ರಕರಣವೊಂದರ ಆರೋಪಿಗಳ ಮಾಹಿತಿ ಸಂಗ್ರಹಿಸಲೆಂದು ಬೈಕ್‌ನಲ್ಲಿ ಹೊರಟಿದ್ದಾಗಲೇ ಈ ಅವಘಡ ಸಂಭವಿಸಿದೆ’ ಎಂದು ಪೊಲೀಸರು ಹೇಳಿದರು.

‘ಯಾವುದೋ ವಾಹನ ಬೈಕ್‌ಗೆ ಡಿಕ್ಕಿ ಹೊಡೆದಿತ್ತು. ಬೈಕ್‌ನಿಂದ ಬಿದ್ದ ಕುಮಾರ್ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಅಸುನೀಗಿದ್ದಾರೆ. ಈ ಸಂಬಂಧ ಸ್ಥಳೀಯರು ಹೇಳಿಕೆ ನೀಡಿದ್ದಾರೆ’ ಎಂದು ಮಾಹಿತಿ ನೀಡಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು