ಸೋಮವಾರ, 22 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತ್ರಕರ್ತ ಹನುಮೇಶ್ ಸೇರಿ ಮೂವರಿಗೆ ರಾಮಾನುಜಾಚಾರ್ಯ ಸದ್ಭಾವನಾ ಪ್ರಶಸ್ತಿ

Published 22 ಫೆಬ್ರುವರಿ 2024, 14:36 IST
Last Updated 22 ಫೆಬ್ರುವರಿ 2024, 14:36 IST
ಅಕ್ಷರ ಗಾತ್ರ

ಬೆಂಗಳೂರು: ಮೇಲುಕೋಟೆಯ ಯದುಗಿರಿ ಯತಿರಾಜ ಶಾಖಾ ಮಠ ನೀಡುವ ‘ಶ್ರೀ ರಾಮಾನುಜಾಚಾರ್ಯ ಸದ್ಭಾವನಾ ಪ್ರಶಸ್ತಿ’ಗೆ ಪತ್ರಕರ್ತ ಹನುಮೇಶ್ ಕೆ. ಯಾವಗಲ್ ಸೇರಿ ಮೂವರು ಆಯ್ಕೆಯಾಗಿದ್ದಾರೆ. 

ಆಧ್ಯಾತ್ಮಿಕ ಹಾಗೂ ಜೀವನ ಕಲೆಯ ಶಿಕ್ಷಣದ ಮೂಲಕ ಸಾಮಾಜಿಕ ಮೌಲ್ಯಗಳನ್ನು ಸಂರಕ್ಷಣೆ ಮಾಡುತ್ತಿರುವ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಟ್ರಸ್ಟಿ ರಂಗನಾಥ್ ಪ್ರಸಾದ್ ಮತ್ತು ಶಿಕ್ಷಣ, ಸಮಾಜ ಸೇವೆ ಹಾಗೂ ಉದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಶ್ರೀಧರ್ ಐಯ್ಯಂಗಾರ್ ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದೇ ಶನಿವಾರ ಮಲ್ಲೇಶ್ವರದಲ್ಲಿರುವ ಯದುಗಿರಿ ಯತಿರಾಜ ಶಾಖಾ ಮಠದಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು, ಯದುಗಿರಿ ಯತಿರಾಜ ನಾರಾಯಣ ರಾಮಾನುಜ ಜೀಯರ್ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಧು-ವರ ಸಮಾವೇಶ ಹಾಗೂ ಶ್ರೀನಿವಾಸ ಕಲ್ಯಾಣೋತ್ಸವವನ್ನೂ ಅದೇ ದಿನ ನಡೆಸಲಾಗುವುದು ಎಂದು ಸಪ್ತಪದಿ ಫೌಂಡೇಷನ್ ಮುಖ್ಯಸ್ಥ ಶ್ರೀನಿವಾಸ ಭಾರದ್ವಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT