ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮಯ್ಯ ವಿ.ವಿ: 592 ವಿದ್ಯಾರ್ಥಿಗಳಿಗೆ ಪದವಿ

Last Updated 18 ಜನವರಿ 2019, 19:15 IST
ಅಕ್ಷರ ಗಾತ್ರ

ಬೆಂಗಳೂರು: ‘ಆತ್ಮವಿಶ್ವಾಸ, ಕೌಶಲ ನಿಮ್ಮ ಭವಿಷ್ಯದ ಹಾದಿ ನಿರ್ಧರಿಸಲಿದೆ’ ಎಂದುಷಿಕಾಗೊದ ಇಲಿನಾಯ್ಸ್ ವಿಶ್ವವಿದ್ಯಾಲಯದ ಕುಲಪತಿ ಮೈಕಲ್‌ ಅಮಿರಿಡಿಸ್‌ ಹೇಳಿದರು.

ರಾಮಯ್ಯಅನ್ವಯಿಕ ವಿಜ್ಞಾನಗಳ ವಿಶ್ವವಿದ್ಯಾಲಯ ಆಯೋಜಿಸಿದ್ದ ಮೂರನೇ ಘಟಿಕೋತ್ಸವದಲ್ಲಿ 592 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ಯಾವುದೇ ಕೋರ್ಸ್‌ ಆಯ್ದುಕೊಂಡರೂ ಚೆನ್ನಾಗಿ ಅಧ್ಯಯನ ಮಾಡಬೇಕು. ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಂಡರೆ ಉದ್ಯೋಗಾವಕಾಶಗಳು ಹೇರಳವಾಗಿ ಲಭ್ಯವಾಗುತ್ತವೆ’ ಎಂದು ಹೇಳಿದರು.

‘ಯಶಸ್ಸಿಗೆ ಅನ್ಯ ಮಾರ್ಗಗಳಿಲ್ಲ. ಶ್ರದ್ಧೆ ಮತ್ತು ಕಠಿಣ ಪರಿಶ್ರಮದಿಂದಲೇ ಅದನ್ನು ಸಾಧಿಸಬೇಕು. ವಿಶ್ವವಿದ್ಯಾಲಯದಲ್ಲಿ ಕಲಿಕೆಗೆ ಪೂರಕವಾದ ವಾತಾವರಣವಿದೆ. ವಿದ್ಯಾರ್ಥಿಗಳು ಇದರ ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಅವರು ತಿಳಿಸಿದರು.

ರಾಮಯ್ಯ ವಿಶ್ವವಿದ್ಯಾಲಯದ ಕುಲಪತಿ ಎಂ.ಆರ್‌.ಜಯರಾಮ್‌ ಮಾತನಾಡಿ, ‘ಪದವಿ ಪಡೆದ ಮಾತ್ರಕ್ಕೆ ಕಲಿಕೆಗೆ ಪೂರ್ಣ ವಿರಾಮ ಹಾಕಬಾರದು. ಅಧ್ಯಯನ ನಿರಂತರವಾಗಿರಬೇಕು’ ಎಂದು ಹೇಳಿದರು.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT