ಶುಕ್ರವಾರ, ಅಕ್ಟೋಬರ್ 23, 2020
24 °C

ಮದುವೆ, ಸಾರ್ವಜನಿಕ ಕಾರ್ಯಕ್ರಮಗಳಿಗೆ ನಿರ್ಬಂಧ ಹಾಕಿ: ರಮೇಶ್‌ಕುಮಾರ್‌

‍ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕೆ ಬರುವವರೆಗೆ ಮದುವೆ ಮತ್ತು ಇತರ ಸಾರ್ವಜನಿಕ ಕಾರ್ಯಕ್ರಮಗಳನ್ನು ನಿಲ್ಲಿಸಬೇಕು ಎಂದು ಕಾಂಗ್ರೆಸ್‌ನ ಕೆ.ಆರ್‌.ರಮೇಶ್‌ಕುಮಾರ್‌ ಸರ್ಕಾರಕ್ಕೆ ಮನವಿ ಮಾಡಿದರು.

ವಿಧಾನಸಭೆಯಲ್ಲಿ ಮಾತನಾಡಿದ ಅವರು, ‘ಜನಕ್ಕೆ ಭಯವೂ ಇಲ್ಲ, ತಿಳಿವಳಿಕೆಯೂ ಇಲ್ಲ. ಬೇಕಾಬಿಟ್ಟಿ ಒಂದು ಕಡೆ ಸೇರುತ್ತಾರೆ ಅಪಾಯಕ್ಕೆ ಸಿಲುಕುತ್ತಾರೆ. ನಮ್ಮ ಬಳಿ ಬಂದಾಗ ಬರಬೇಡಿ ಎಂದು ಹೇಳಲೂ ಆಗುವುದಿಲ್ಲ. ಮದುವೆ ಮತ್ತು ಸಾರ್ವಜನಿಕ ಸಮಾರಂಭಗಳಿಂದ ವೈರಾಣು‌ ಹೆಚ್ಚಿನ ಪ್ರಮಾಣದಲ್ಲಿ ಹರಡುತ್ತಿದೆ’ ಎಂದರು.

‘ಬೀಗರೂಟ ಎಂದು ನೂರಾರು ಜನ ಸೇರುತ್ತಾರೆ. ಈ ಜನಕ್ಕೆ ಹೇಗೆ ತಿಳಿ ಹೇಳಬೇಕು ಎಂಬುದು ಗೊತ್ತಾಗುವುದಿಲ್ಲ. ಆದ್ದರಿಂದ ಹೆಚ್ಚು ಜನ ಸೇರುವ ಕಾರ್ಯಕ್ರಮಗಳಿಗೆ ಅನುಮತಿ ನೀಡಬಾರದು’ ಎಂದು ಅವರು ಮುಖ್ಯಮಂತ್ರಿಯವರನ್ನು ಮನವಿ ಮಾಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು