ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ರಾಮಯ್ಯ ಆಸ್ಪತ್ರೆಯಲ್ಲಿ ಕ್ಯಾನ್ಸರ್‌ಗೆ ಐಒಆರ್‌ಟಿ ಚಿಕಿತ್ಸೆ

Published 16 ಮೇ 2024, 16:26 IST
Last Updated 16 ಮೇ 2024, 16:26 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಮಯ್ಯ ಸ್ಮಾರಕ ಆಸ್ಪತ್ರೆಯು ಕ್ಯಾನ್ಸರ್‌ ಚಿಕಿತ್ಸೆಗೆ ದೇಶದಲ್ಲಿಯೇ ಮೊದಲ ಬಾರಿಗೆ ‘ಇಂಟ್ರಾ ಆಪರೇಟಿವ್ ರೇಡಿಯೇಶನ್‌ ಥೆರಪಿ (ಐಒಆರ್‌ಟಿ)’ ಪರಿಚಯಿಸಿದೆ’ ಎಂದು ರಾಮಯ್ಯ ಇನ್‌ಸ್ಟಿಟ್ಯೂಟ್‌ ಆಫ್‌ ಅಂಕೋಸೈನ್ಸ್‌ನ ನಿರ್ದೇಶಕ ಡಾ. ಕೆ. ಹರೀಶ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ರಾಮಯ್ಯ ಆಸ್ಪತ್ರೆ ಕ್ಯಾನ್ಸರ್‌ ಚಿಕಿತ್ಸೆಗೆ ಸಂಬಂಧಿಸಿದಂತೆ ಮೂರು ವಿಧಾನದಲ್ಲಿ ರೇಡಿಯೇಶನ್‌ ಥೆರಪಿ ಚಿಕಿತ್ಸೆ ನೀಡುವ ದಕ್ಷಿಣ ಭಾರತದ ಮೊದಲ ಆಸ್ಪತ್ರೆಯಾಗಿದೆ. ಕ್ಯಾನ್ಸರ್‌ ರೋಗಿಯನ್ನು ಶಸ್ತ್ರ ಚಿಕಿತ್ಸೆಗೆ ಒಳಪಡಿಸುವ ಸಂದರ್ಭದಲ್ಲಿ ಐಒಆರ್‌ಟಿ ಮೂಲಕ ನಿಗದಿತ ಕ್ಯಾನ್ಸರ್‌ ಗಡ್ಡೆಯ ಕೋಶಗಳನ್ನು (ಕ್ಯಾನ್ಸರ್‌ ಬೆಡ್‌ ಸೆಲ್‌ಗಳು) ನಾಶಪಡಿಸಲಾಗುತ್ತದೆ. ಈ ಚಿಕಿತ್ಸೆ ಆರೋಗ್ಯಕರ ಅಂಗಾಶಗಳಿಗೆ ಯಾವುದೇ ಹಾನಿ ಮಾಡುವುದಿಲ್ಲ’ ಎಂದು ತಿಳಿಸಿದರು.

‘ರಾಮಯ್ಯ ಆಸ್ಪತ್ರೆಯಲ್ಲಿ ಐಒಆರ್‌ಟಿ ಬಳಸಿ ಸ್ತನ ಕ್ಯಾನ್ಸರ್ ರೋಗಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಎರಡನೇ ಹಂತದ ಸ್ತನ ಕ್ಯಾನ್ಸರ್‌ನಿಂದ ಬಳಲುತ್ತಿದ್ದ 55 ವರ್ಷ ಹಾಗೂ 49 ವರ್ಷದ ಇಬ್ಬರು ಮಹಿಳೆಯರಿಗೆ ಸರ್ಜಿಕಲ್ ಆ್ಯಂಡ್ ರೇಡಿಯೇಶನ್ ತಂಡ ಐಒಆರ್‌ಟಿ ಮೂಲಕ ಯಶಸ್ವಿಯಾಗಿ ಸ್ತನ ಕ್ಯಾನ್ಸರ್ ಶಸ್ತ್ರಚಿಕಿತ್ಸೆ ಮಾಡಿದೆ‘ ಎಂದು ಹೇಳಿದರು.

‘ಕ್ಯಾನ್ಸರ್‌ ರೋಗಿಗಳ ಜೀವನದ ಗುಣಮಟ್ಟ ಹೆಚ್ಚಿಸುವಲ್ಲಿ ಐಒಆರ್‌ಟಿ ಸಹಾಯಕವಾಗಿದೆ. ಇತರೆ ಸಾಂಪ್ರದಾಯಿಕ ಚಿಕಿತ್ಸೆಗಳಿಗೆ ಹೋಲಿಸಿದರೆ ಈ ಚಿಕಿತ್ಸೆಯಲ್ಲಿ ಅಡ್ಡಪರಿಣಾಮ ಕಡಿಮೆ. ಕಡಿಮೆ ಸಮಯ ಮತ್ತು ವೆಚ್ಚದಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ದೊರೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಆರೋಗ್ಯ ಯೋಜನೆಗಳ ಅಡಿಯಲ್ಲಿ ಈ ಚಿಕಿತ್ಸೆಯನ್ನು ನೀಡಲಾಗುತ್ತಿದೆ’ ಎಂದು ಡಾ. ಕೀರ್ತಿ ಕೌಶಿಕ್‌ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT