ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಆಕಾಶ್‌’ ವಿದ್ಯಾರ್ಥಿನಿ ರಾಜ್ಯಕ್ಕೆ ಮೊದಲ ರ‍್ಯಾಂಕ್‌

Last Updated 17 ಜುಲೈ 2020, 20:59 IST
ಅಕ್ಷರ ಗಾತ್ರ

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ 99.34 ಅಂಕ ಗಳಿಸಿರುವ ಎಂ.ಎನ್. ಪ್ರೇರಣಾ ಅವರು ಆಕಾಶ್‌ ಇನ್‌ಸ್ಟಿಟ್ಯೂಟ್‌ನ ರಾಜಾಜಿನಗರ ಶಾಖೆಯಲ್ಲಿ ಕೋಚಿಂಗ್‌ ಪಡೆದಿದ್ದಾರೆ.

‘ನಮ್ಮ ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ಪ್ರೇರಣಾ, 596 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೇ ಮೊದಲ ಸ್ಥಾನ ಪಡೆದಿರುವುದು ಹೆಮ್ಮೆಯ ಸಂಗತಿ. ವಿದ್ಯಾರ್ಥಿನಿಯ ಕಠಿಣ ಪರಿಶ್ರಮ, ಪೋಷಕರ ಪ್ರೋತ್ಸಾಹ ಹಾಗೂ ಗುಣಮಟ್ಟದ ಪೂರ್ವಸಿದ್ಧತೆ ಹಾಗೂ ಆಕಾಶ್‌ ಇನ್‌ಸ್ಟಿಟ್ಯೂಟ್‌ನಲ್ಲಿ ದೊರೆತ ಮಾರ್ಗದರ್ಶನ ಅವರ ಈ ಸಾಧನೆಗೆ ಕಾರಣ’ ಎಂದು ಸಂಸ್ಥೆಯ ನಿರ್ದೇಶಕ ಆಕಾಶ್‌ ಚೌಧರಿ ಹೇಳಿದ್ದಾರೆ.

‘ಶಿಕ್ಷಣ ಕ್ಷೇತ್ರದಲ್ಲಿ ಯಶಸ್ಸು ಸಾಧಿಸುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗೆ ನೆರವಾಗುವುದು ನಮ್ಮ ಗುರಿ. ಶೈಕ್ಷಣಿಕ ಹಾಗೂ ಪ್ರಸ್ತುತ ವಿದ್ಯಮಾನ, ಬೆಳವಣಿಗೆಗಳ ಬಗ್ಗೆ ವಿದ್ಯಾರ್ಥಿಗಳನ್ನು ಸಿದ್ಧಪಡಿಸಲು ರಾಷ್ಟ್ರೀಯ ಶೈಕ್ಷಣಿಕ ತಂಡದ ನೇತೃತ್ವದಲ್ಲಿ ಕೇಂದ್ರೀಕೃತ ಆಂತರಿಕ ಪ್ರಕ್ರಿಯೆಗಳನ್ನು ನಡೆಸಲಾಗುತ್ತದೆ. ಸಂಸ್ಥೆಯಲ್ಲಿ ತರಬೇತಿ ಪಡೆದಿರುವ ವಿದ್ಯಾರ್ಥಿಗಳು ಎನ್‍ಟಿಎಸ್‍ಇ, ಕೆವಿಪಿವೈ ಹಾಗೂ ಒಲಿಂಪಿಯಾಡ್ಸ್ ರೀತಿಯ ವಿವಿಧ ವೈದ್ಯಕೀಯ ಹಾಗೂ ಎಂಜಿನಿಯರಿಂಗ್ ಪ್ರವೇಶ ಪರೀಕ್ಷೆಗಳಲ್ಲಿ ನಿರಂತರವಾಗಿ ಯಶಸ್ಸು ಸಾಧಿಸುತ್ತಾ ಬರುತ್ತಿದ್ದಾರೆ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT