ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾವ್ ಗೆ ಪ್ರಶಸ್ತಿ

Last Updated 14 ಆಗಸ್ಟ್ 2019, 20:10 IST
ಅಕ್ಷರ ಗಾತ್ರ

ಬೆಂಗಳೂರು: ಎಲೆಕ್ಟ್ರಾನಿಕ್ ತಂತ್ರಜ್ಞಾನ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದವರಿಗೆ ಸುಧಾರಿತ ಕಂಪ್ಯೂಟಿಂಗ್ ಮತ್ತು ಸುಧಾರಿತ ಸಂವಹನ ಸೊಸೈಟಿ ಕೊಡಮಾಡುವ ‘ಎಸಿಸಿಎಸ್ – ಸಿಡಿಎಸಿ 2019 ವಾರ್ಷಿಕ ಪ್ರಶಸ್ತಿ’ಗೆ ದೆಹಲಿ ಐಐಟಿ ನಿರ್ದೇಶಕ ಪ್ರೊ.ರಾಮಗೋಪಾಲ್ ರಾವ್‌ ಆಯ್ಕೆಯಾಗಿದ್ದಾರೆ.

ಪ್ರಶಸ್ತಿಯು ₹1 ಲಕ್ಷ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿದ್ದು, ಸೆಪ್ಟೆಂಬರ್ 6 ರಂದು ಎಲೆಕ್ಟ್ರಾನಿಕ್‌ ಸಿಟಿಯ ಐಐಐಟಿ – ಬಿ ಆವರಣದಲ್ಲಿ ನಡೆಯುವ ‘ಸುಧಾರಿತ ಕಂಪ್ಯೂಟಿಂಗ್ ಮತ್ತು ಸಂವಹನ ಸಮ್ಮೇಳನ’ದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಸ್ಥೆಯ ಅಧ್ಯಕ್ಷ ಡಾ.ಸರಗೂರು ಎಂ.ಶ್ರೀನಿಧಿ ಬುಧವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು.

ನ್ಯಾನೊ ತಂತ್ರಜ್ಞಾನ ಆಧಾರಿತ ಸಂವಹನ ತಂತ್ರಜ್ಞಾನ ಕ್ಷೇತ್ರಕ್ಕೆ ನೀಡಿದ ಗಣನೀಯ ಸೇವೆಯನ್ನು ಗುರುತಿಸಿ ಪ್ರೊ.ರಾಮಗೋಪಾಲ್ ರಾವ್ ಅವರನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT