ಬೆಂಗಳೂರು: ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯ ಮನೆಯೊಂದರಲ್ಲಿ ಮಂಗಳವಾರ ಮಹಿಳೆಯೊಬ್ಬರ ಮೃತದೇಹ ಪತ್ತೆಯಾಗಿದ್ದು, ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

‘ಕಾಮಾಕ್ಷಿಪಾಳ್ಯದ ಬಾರೊಂದರಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್ ಎಂಬಾತನ ಮನೆಯಲ್ಲಿ ಮೃತದೇಹ ಸಿಕ್ಕಿದೆ. ಸದ್ಯ ಆತ ತಲೆಮರೆಸಿಕೊಂಡಿದ್ದು, ಶೋಧಕ್ಕಾಗಿ ವಿಶೇಷ ತಂಡಗಳನ್ನು ರಚಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಪ್ರಿಂಟಿಂಗ್ ಪ್ರೆಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ಸೋಮವಾರ ನಾಪತ್ತೆಯಾಗಿದ್ದರು. ಆ ಬಗ್ಗೆ ಅವರ ಪತಿ ಮಾಗಡಿ ರಸ್ತೆ ಠಾಣೆಗೆ ದೂರು ನೀಡಿದ್ದರು’ ಎಂದೂ ಹೇಳಲಾಗಿದೆ.

ಮದ್ಯದ ಬಾಟಲಿ, ಸಿಗರೇಟ್; ‘ಪ್ರವೀಣ್ ಹಾಗೂ ಮಹಿಳೆ ನಡುವೆ ಸಲುಗೆ ಇದ್ದ ಬಗ್ಗೆ ಮಾಹಿತಿ ಸಿಕ್ಕಿದೆ. ಸೋಮವಾರ ಅವರಿಬ್ಬರೂ ಭೇಟಿಯಾಗಿದ್ದರು. ಮಹಿಳೆಯನ್ನು ಮನೆಗೆ ಕರೆದೊಯ್ದಿದ್ದ ಪ್ರವೀಣ್, ಅಲ್ಲಿಯೇ ಮದ್ಯದ ಪಾರ್ಟಿ ಮಾಡಿದ್ದ. ನಂತರ ಮಹಿಳೆ ಮೇಲೆ ಆರೋಪಿ ಅತ್ಯಾಚಾರ ಎಸಗಿರುವ ಅನುಮಾನವಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮೃತದೇಹ ಸಿಕ್ಕ ಸ್ಥಳದಲ್ಲಿ ಸಿಗರೇಟ್ ಚೂರುಗಳು ಹಾಗೂ ಮದ್ಯದ ಬಾಟಲಿಗಳು ಸಿಕ್ಕಿವೆ. ಮೃತದೇಹದ ಮೇಲೆ ಯಾವುದೇ ಗಾಯಗಳಿಲ್ಲ. ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಿದ ನಂತರವೇ ನಿಖರ ಕಾರಣ ತಿಳಿಯಲಿದೆ’ ಎಂದೂ ಮೂಲಗಳು ತಿಳಿಸಿವೆ.

ಲೈಂಗಿಕ ಕ್ರಿಯೆ ವೇಳೆ ಸಾವು? ‘ಆರೋಪಿ ಹಾಗೂ ಮಹಿಳೆ, ಹಲವು ವರ್ಷಗಳಿಂದ ಪರಿಚಯವಿದ್ದರು ಎಂಬುದು ಗೊತ್ತಾಗಿದೆ. ಸೋಮವಾರವೂ ಲೈಂಗಿಕ ಕ್ರಿಯೆ ನಡೆಸುವ ವೇಳೆಯಲ್ಲೇ ಪ್ರಜ್ಞೆ ಕಳೆದುಕೊಂಡು ಮಹಿಳೆ ಮೃತಪಟ್ಟಿರುವ ಶಂಕೆಯೂ ಇದೆ. ಇತ್ತೀಚೆಗಷ್ಟೆ ಬ್ಯಾಡರಹಳ್ಳಿ ಠಾಣೆ ವ್ಯಾಪ್ತಿಯಲ್ಲೂ ಇಂಥ ಘಟನೆ ನಡೆದಿತ್ತು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.