ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಲಸ ಕೊಟ್ಟವಳಿಗೆ ಮದ್ಯ ಕುಡಿಸಿ ಅತ್ಯಾಚಾರ

Last Updated 5 ಮೇ 2020, 20:18 IST
ಅಕ್ಷರ ಗಾತ್ರ

ಬೆಂಗಳೂರು: ತಾನು ಕೆಲಸ ಮಾಡುತ್ತಿದ್ದ ಕಂಪನಿಯ ಮಾಲೀಕರಾದ 42 ವರ್ಷದ ಮಹಿಳೆಗೆ ಮದ್ಯ ಕುಡಿಸಿ ಅತ್ಯಾಚಾರ ಎಸಗಿದ ಆರೋಪದಡಿ ರಾಕೇಶ್ (26) ಎಂಬಾತನನ್ನು ರಾಜರಾಜೇಶ್ವರಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸ್ಥಳೀಯ ನಿವಾಸಿಯಾದ ಆರೋಪಿ, ಸಂತ್ರಸ್ತೆಯ ಮಾನವ ಸಂಪನ್ಮೂಲ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪತಿಯಿಂದ ವಿಚ್ಚೇದನ ಪಡೆದಿದ್ದ ಮಹಿಳೆ ಒಂಟಿಯಾಗಿ ನೆಲೆಸಿದ್ದರು’ ಎಂದು ಪೊಲೀಸರು ಹೇಳಿದರು.

‘ಪರಿಚಯಸ್ಥರ ಮೂಲಕ ಆರೋಪಿಯು 2017ರಲ್ಲಿ ಮಹಿಳೆ ಕಂಪನಿಯಲ್ಲಿ ಕೆಲಸ ಗಿಟ್ಟಿಸಿಕೊಂಡಿದ್ದ. ನಂತರ, ಅವರಿಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಮದುವೆಯಾಗುವುದಾಗಿ ಹೇಳಿ ನಂಬಿಸಿ ಆರೋಪಿ ಕೃತ್ಯ ಎಸಗಿದ್ದ‘ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT