ಸೋಮವಾರ, 16 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು | ಬಾಲಕಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Published : 7 ಆಗಸ್ಟ್ 2024, 0:06 IST
Last Updated : 7 ಆಗಸ್ಟ್ 2024, 0:06 IST
ಫಾಲೋ ಮಾಡಿ
Comments

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಯುವಕನನ್ನು ಡಿ.ಜೆ.ಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಡಿ.ಜೆ. ಹಳ್ಳಿಯ ನಿವಾಸಿ ಸಾದ್ ಮುಸೈಬ್‌ ಬಂಧಿತ ಆರೋಪಿ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿದೆ.

‘ಕೃತ್ಯವು ಕೆ.ಜೆ.ಹಳ್ಳಿ ವ್ಯಾಪ್ತಿಯಲ್ಲಿ ನಡೆದಿದ್ದು ಆ ಠಾಣೆಗೆ ಪ್ರಕರಣ ವರ್ಗಾವಣೆ ಮಾಡಲಾಗಿದೆ. ಆ ಠಾಣೆ ಪೊಲೀಸರು ತನಿಖೆ ಮುಂದುವರೆಸಲಿದ್ದಾರೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘15 ವರ್ಷದ ಬಾಲಕಿಯನ್ನು ಪರಿಚಯ ಮಾಡಿಕೊಂಡಿದ್ದ ಆರೋಪಿ, ಪ್ರೀತಿಸುವ ನಾಟಕವಾಡಿದ್ದ. ಅಲ್ಲದೇ ಮದುವೆ ಆಗುವುದಾಗಿಯೂ ನಂಬಿಸಿ ಮನೆಗೆ ಕರೆದೊಯ್ದು, ಪೋಷಕರಿಗೆ ಪರಿಚಯ ಮಾಡಿಕೊಟ್ಟಿದ್ದ. ಅದಾದ ಮೇಲೆ ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಬಾಲಕಿಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದ. ಪೋಷಕರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆಯೊಡ್ಡಿದ್ದ’ ಎಂದು ಪೊಲೀಸರು ಹೇಳಿದರು.

‘ಹೊಟ್ಟೆ ನೋವಿನಿಂದ ಬಳುತ್ತಿದ್ದ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆಗೆ ಒಳಪಡಿಸಿದ್ದರು. ಆಗ ಬಾಲಕಿ ಗರ್ಭಿಣಿ ಆಗಿರುವುದು ಗೊತ್ತಾಗಿತ್ತು. ನಂತರ, ಬಾಲಕಿಯನ್ನು ವಿಚಾರಣೆ ನಡೆಸಿದಾಗ ಆರೋಪಿ ದೌರ್ಜನ್ಯ ಎಸಗಿದ್ದನ್ನು ಹೇಳಿಕೊಂಡಿದ್ದಳು. ಪೋಷಕರು ನೀಡಿದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

‘ಆರೋಪಿ ಸಾಮಾಜಿಕ ಮಾಧ್ಯಮದಲ್ಲಿ ಸಕ್ರಿಯನಾಗಿದ್ದ. ಡ್ಯಾಗರ್‌ ಹಿಡಿದು ಸಿನಿಮಾ ಹೀರೊ ರೀತಿ ಫೋಟೊ ತೆಗೆಸಿಕೊಂಡು ಇನ್‌ಸ್ಟಾಗ್ರಾಮ್‌ನಲ್ಲಿ ಹಾಕುತ್ತಿದ್ದ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT